SK Home Ad
Home ಸುದ್ದಿ Samyukta Karnataka News Live: ಭಾರತದ ಆರ್ಥಿಕತೆಗೆ ಭರ್ಜರಿ ವೇಗ; GDP ಬೆಳವಣಿಗೆಗೆ ಮೋದಿ ಶ್ಲಾಘನೆ

Samyukta Karnataka News Live: ಭಾರತದ ಆರ್ಥಿಕತೆಗೆ ಭರ್ಜರಿ ವೇಗ; GDP ಬೆಳವಣಿಗೆಗೆ ಮೋದಿ ಶ್ಲಾಘನೆ

0
384

‘ಸಾಲಗಾರರ ಸಹಕಾರ ಸಂಘ’ದಿಂದ ‘ಕಾಸು ದುಡ್ಡು’ ಸಾಂಗ್ ಔಟ್: ವಿಭಿನ್ನ ಕಾಮಿಡಿ ಮತ್ತು ಡ್ರಾಮಾ ಕಥಾಹಂದರದೊಂದಿಗೆ ಪ್ರೇಕ್ಷಕರ ಗಮನ ಸೆಳೆಯುತ್ತಿರುವ ‘ಸಾಲಗಾರರ ಸಹಕಾರ ಸಂಘ’ ಚಿತ್ರದ ಬಹುನಿರೀಕ್ಷಿತ ‘ಕಾಸು ದುಡ್ಡು’ ಹಾಡು ಅಧಿಕೃತವಾಗಿ ಬಿಡುಗಡೆಯಾಗಿದೆ. A2 Music ಯೂಟ್ಯೂಬ್ ಚಾನೆಲ್‌ನಲ್ಲಿ ಹಾಡಿನ ವಿಡಿಯೋ ಲಭ್ಯವಿದ್ದು, ಚಿತ್ರದ ಬಿಡುಗಡೆಗೂ ಮುನ್ನ ಮತ್ತೊಂದು ಸಂಗೀತಮಯ ಅಪ್‌ಡೇಟ್ ಪ್ರೇಕ್ಷಕರಿಗೆ ಸಿಕ್ಕಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

‘ಭಾರತ ಮತ್ತೆ ಅರಳಿತು’ – 7.8% GDP ಬೆಳವಣಿಗೆ ಕುರಿತು ಪ್ರಧಾನಿ ಮೋದಿ ಪ್ರತಿಕ್ರಿಯೆ : ಜಾಗತಿಕ ಅನಿಶ್ಚಿತತೆ, ತೈಲ ಬೆಲೆ ಏರಿಕೆ ಹಾಗೂ ಪೂರೈಕೆ ಸರಪಳಿ ಸಮಸ್ಯೆಗಳ ನಡುವೆಯೂ 2026-27ನೇ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಭಾರತದ ನೈಜ GDP ಬೆಳವಣಿಗೆ ಶೇ.7.8ಕ್ಕೆ ತಲುಪಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಏಪ್ರಿಲ್-ಜೂನ್ ತ್ರೈಮಾಸಿಕದ ಈ ಬೆಳವಣಿಗೆ ದರವು ಆರ್‌ಬಿಐನ ಶೇ.7ರ ಮುನ್ಸೂಚನೆಗಿಂತಲೂ ಹೆಚ್ಚಾಗಿದೆ. ಜಾಗತಿಕ ಅನಿಶ್ಚಿತತೆ, ತೈಲ ಬೆಲೆ ಆಘಾತಗಳ ನಡುವೆಯೂ ಸಾಧಿಸಿದ ಬೆಳವಣಿಗೆಯನ್ನು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಕಾಕ್ರೋಚ್ ಪ್ರತಿಭಟನೆಗೆ ಸುಪ್ರೀಂ ಮಧ್ಯಪ್ರವೇಶವಿಲ್ಲ : ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ (CJP) ಆಯೋಜಿಸಿರುವ ಪ್ರತಿಭಟನಾ ಮೆರವಣಿಗೆಯನ್ನು ತಡೆಯುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯಲ್ಲಿ ಸುಪ್ರೀಂ ಕೋರ್ಟ್ ತಕ್ಷಣದ ಮಧ್ಯಪ್ರವೇಶಕ್ಕೆ ನಿರಾಕರಿಸಿದೆ. ಇಂಡಿಯಾ ಗೇಟ್‌ನಿಂದ ನವದೆಹಲಿ ಪೊಲೀಸ್ ಪ್ರಧಾನ ಕಚೇರಿವರೆಗೆ ನಡೆಯಲಿರುವ ಮೆರವಣಿಗೆಯಿಂದ ಸದ್ಯಕ್ಕೆ ಯಾವುದೇ ಅಹಿತಕರ ಘಟನೆ ಸಂಭವಿಸುತ್ತದೆ ಎಂದು ಊಹಿಸಲು ಕಾರಣವಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠ ಹೇಳಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

‘ಟಾಸ್’ ಅಬ್ಬರ; ಟೀಸರ್ ಮೂಲಕ ಕುತೂಹಲ ಹೆಚ್ಚಿಸಿದ ಅರ್ಜುನ್ : ತುಳು-ಕನ್ನಡ ಚಿತ್ರರಂಗದಲ್ಲಿ ನಿರೀಕ್ಷೆ ಮೂಡಿಸಿರುವ ಬಹುನಿರೀಕ್ಷಿತ ‘ಟಾಸ್’ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಸಿನಿಪ್ರಿಯರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ನಟ ಹಾಗೂ ನಿರ್ದೇಶಕ ಅರ್ಜುನ್ ದೇವ್ ಈ ಸಿನಿಮಾದಲ್ಲಿ ಈವರೆಗೆ ಕಾಣಿಸಿಕೊಂಡಿರದ ವಿಭಿನ್ನ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿರುವುದು ಟೀಸರ್‌ನ ಪ್ರಮುಖ ಆಕರ್ಷಣೆಯಾಗಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಆವಕಾಡೊ ಕೃಷಿ – ಮೋದಿ ಮೆಚ್ಚುಗೆ ಬೆನ್ನಲ್ಲೇ ಚಿಕ್ಕಮಗಳೂರು ರೈತರಲ್ಲಿ ಹೊಸ ಚೈತನ್ಯ! : ಕಾಫಿ ಬೆಳೆಗೆ ಹೆಸರುವಾಸಿಯಾಗಿರುವ ಚಿಕ್ಕಮಗಳೂರು ಜಿಲ್ಲೆಯ ರೈತರು ಇದೀಗ ಸಾಂಪ್ರದಾಯಿಕ ಬೆಳೆಗಳ ಜೊತೆಗೆ ಆವಕಾಡೊ ಬೆಳೆಯುವ ಮೂಲಕ ಹೆಚ್ಚುವರಿ ಆದಾಯ ಗಳಿಸುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆಗಸ್ಟ್ 30ರಂದು ಪ್ರಸಾರವಾದ 137ನೇ ‘ಮನ್‌ ಕಿ ಬಾತ್‌’ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ದೇಶದ ವಿವಿಧ ಭಾಗಗಳ ರೈತರ ಹೊಸ ಕೃಷಿ ಪ್ರಯೋಗಗಳನ್ನು ಪ್ರಸ್ತಾಪಿಸುವ ಸಂದರ್ಭದಲ್ಲಿ ಚಿಕ್ಕಮಗಳೂರು ರೈತರ ಪ್ರಯತ್ನವನ್ನು ಶ್ಲಾಘಿಸಿದ ನಂತರ, ಕೃಷಿ ವಲಯ ಮತ್ತು ಮಾರುಕಟ್ಟೆಯಲ್ಲಿ ಆವಕಾಡೊ ಬೆಳೆಗೆ ಹೊಸ ಚೈತನ್ಯ ಮೂಡಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

555ನೇ ಚಿತ್ರಕ್ಕೆ ಸಿದ್ಧವಾದ ಅನುಪಮ್ ಖೇರ್ : ಬಾಲಿವುಡ್‌ನ ಹಿರಿಯ ನಟ ಅನುಪಮ್ ಖೇರ್ ತಮ್ಮ ಸಿನಿ ವೃತ್ತಿಜೀವನದ ಮಹತ್ವದ ಮೈಲಿಗಲ್ಲಾಗಿರುವ 555ನೇ ಸಿನಿಮಾವನ್ನು ಘೋಷಿಸಿದ್ದಾರೆ. ಆದರೆ ಚಿತ್ರದ ಶೀರ್ಷಿಕೆ, ನಿರ್ದೇಶಕರು, ನಿರ್ಮಾಣ ಸಂಸ್ಥೆ ಹಾಗೂ ತಮ್ಮ ಪಾತ್ರದ ಕುರಿತ ಯಾವುದೇ ವಿವರಗಳನ್ನು ಸದ್ಯಕ್ಕೆ ಬಹಿರಂಗಪಡಿಸದೆ ಸಸ್ಪೆನ್ಸ್ ಕಾಯ್ದುಕೊಂಡಿದ್ದಾರೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

25ನೇ ದಿನದ ಸಂಭ್ರಮದಲ್ಲಿ ಅಯೋಗ್ಯ: ನಟ ಸತೀಶ್ ನೀನಾಸಂ, ರಚಿತಾ ರಾಮ್ ಜೋಡಿಯ ಅಯೋಗ್ಯ ೨ ಚಿತ್ರ ೨೫ ದಿನಗಳನ್ನು ಪೂರೈಸಿದೆ. ಭರ್ಜರಿ ಓಪನಿಂಗ್ ಪಡೆದುಕೊಳ್ಳುವ ಮೂಲಕ ಬಾಕ್ಸಾಫೀಸ್‌ನಲ್ಲಿ ಜೋರಾಗಿಯೇ ಸದ್ದು ಮಾಡಿದ ‘ಅಯೋಗ್ಯ’, ಇದೀಗ ಸುಮಾರು ೪೦ ಚಿತ್ರಮಂದಿರಗಳಲ್ಲಿ ೨೫ ದಿನಗಳ ಪ್ರದರ್ಶನ ಕಂಡಿದೆ. ೨೫ ದಿನಗಳನ್ನು ಪೂರೈಸಿದ ಖುಷಿಯಲ್ಲಿ ಮಂಡ್ಯ ಚಿತ್ರಮಂದಿರದಲ್ಲಿ ಅಭಿಮಾನಿಗಳೊಂದಿಗೆ ಸಂಭ್ರಮಿಸಿದ ನಟ ನೀನಾಸಂ ಸತೀಶ್ ಹಾಗೂ ಚಿತ್ರತಂಡ, ಕೇಕ್ ಕತ್ತರಿಸಿ ಖುಷಿ ಹಂಚಿಕೊಂಡರು. ಹಾಗೆಯೇ ಇದೇ ಖುಷಿಯಲ್ಲಿ ಟ್ರೇಲರ್ ರಿಲೀಸ್ ಮಾಡಿದೆ ಚಿತ್ರತಂಡ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಪರಿಷತ್ ನಾಮನಿರ್ದೇಶನಕ್ಕೆ ರಾಜಕಾರಣಿಗಳ ಶಿಫಾರಸು ಬೇಡ : ವಿಧಾನ ಪರಿಷತ್ತಿನ 5 ಸ್ಥಾನಗಳಿಗೆ ನಾಮನಿರ್ದೇಶನ ಮಾಡುವಾಗ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ರಾಜಕಾರಣಿಗಳು ಮತ್ತು ಅವರ ಹಿಂಬಾಲಕರ ಹೆಸರುಗಳನ್ನು ಶಿಫಾರಸು ಮಾಡಬಾರದು ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಅವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಸೆಪ್ಟೆಂಬರ್ 2ರಂದು ಸುದೀಪ್ ಅಭಿಮಾನಿಗಳಿಗೆ ಭರ್ಜರಿ ಸರ್ಪ್ರೈಸ್; ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಸಂಭ್ರಮಕ್ಕೆ ದಿನಗಣನೆ ಆರಂಭವಾಗಿದ್ದು, ಸೆಪ್ಟೆಂಬರ್ 2ರಂದು ಅಭಿಮಾನಿಗಳಿಗೆ ಹಲವು ವಿಶೇಷ ಅಪ್‌ಡೇಟ್‌ಗಳು ಸಿಗುವ ನಿರೀಕ್ಷೆಯಿದೆ. ಇದೇ ಸಂದರ್ಭದಲ್ಲಿ ಸುದೀಪ್ ಅಭಿನಯದ ಬಹುನಿರೀಕ್ಷಿತ ‘ಬಿಲ್ಲಾ ರಂಗ ಬಾಷಾ: ಫಸ್ಟ್ ಬ್ಲಡ್’ (BRB) ಚಿತ್ರತಂಡವೂ ದೊಡ್ಡ ಘೋಷಣೆಗೆ ಸಿದ್ಧವಾಗಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

E20 ಇಂಧನ ವಿವಾದ – ಅರ್ಜಿ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ನಡೆ : ಪೆಟ್ರೋಲ್ ಪಂಪ್‌ಗಳಲ್ಲಿ ಎಥೆನಾಲ್ ಪ್ರಮಾಣವನ್ನು ಲೇಬಲ್ ಮಾಡಬೇಕು ಹಾಗೂ ಬಿಲ್‌ನಲ್ಲಿ ಶೇಕಡಾವಾರು ನಮೂದಿಸಬೇಕು ಎಂಬ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆಗೆ ಸ್ವೀಕರಿಸಲು ನಿರಾಕರಿಸಿದೆ. ಹೈಕೋರ್ಟ್‌ಗೆ ತೆರಳಲು ಅರ್ಜಿದಾರರಿಗೆ ಅವಕಾಶ ನೀಡಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ತಿಂಗಳ ಹಪ್ತಾ ವಸೂಲಿ ಆಡಿಯೋ ವೈರಲ್ – ಮೂವರು ಪಿಎಸ್‌ಐ ಗಳ ತಲೆದಂಡ : ದಾಂಡೇಲಿ ಅಪರಾಧ ವಿಭಾಗದಲ್ಲಿದ್ದ ಕಿರಣ್ ಪಾಟೀಲ್, ಹಳಿಯಾಳದ ವಿನೋದ ರೆಡ್ಡಿ, ಅಪರಾಧ ವಿಭಾಗದ ಪಿಎಸ್ ಐ ಕೃಷ್ಣ ಸಸ್ಪೆಂಡ್ ಆಗಿದ್ದಾರೆ. ವರ್ಗಾವಣೆಗಾಗಿ ಕಮಿಷನ್ ಹಾಗೂ ಹಿರಿಯ ಅಧಿಕಾರಿಗಳಿಗೆ ‘ಮಂತ್ಲಿ’ (ಮಾಸಿಕ ಹಪ್ತಾ) ನೀಡುವ ಬಗ್ಗೆ ಮಾತನಾಡಿಕೊಂಡಿದ್ದ ಆಡಿಯೋ, ವೈರಲ್ ಆದ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಮೂವರು ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ಗಳನ್ನು , ಕಾರವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ದೀಪನ್ ಅವರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ದಕ್ಷಿಣ ಭಾರತದಲ್ಲಿ ಬಿಗ್ ಬಾಸ್ ಧಮಾಕಾ; ಕಿರುತೆರೆ ಪ್ರೇಕ್ಷಕರಲ್ಲಿ ಭಾರೀ ಕುತೂಹಲ ಮೂಡಿಸಿರುವ ‘ಬಿಗ್ ಬಾಸ್’ ಹೊಸ ಸೀಸನ್‌ಗಳ ಕೌಂಟ್‌ಡೌನ್ ಆರಂಭವಾಗಿದೆ. ಈ ಬಾರಿ ದಕ್ಷಿಣ ಭಾರತದ ನಾಲ್ಕು ಭಾಷೆಗಳಾದ ತಮಿಳು, ತೆಲುಗು, ಕನ್ನಡ ಮತ್ತು ಮಲಯಾಳಂ ಆವೃತ್ತಿಗಳು ಒಂದೇ ದಿನ, ಅಂದರೆ ಸೆಪ್ಟೆಂಬರ್ 6ರಂದು ಪ್ರೇಕ್ಷಕರ ಮುಂದೆ ಬರಲಿವೆ. ಇದರ ನಡುವೆ ನಾಲ್ಕು ಭಾಷೆಗಳ ಬಿಗ್ ಬಾಸ್ ಶೋಗಳ ನಿರೂಪಕರಾದ ವಿಜಯ್ ಸೇತುಪತಿ, ನಾಗಾರ್ಜುನ, ಕಿಚ್ಚ ಸುದೀಪ್ ಹಾಗೂ ಮೋಹನ್‌ಲಾಲ್ ಒಟ್ಟಿಗೆ ಕಾಣಿಸಿಕೊಂಡಿರುವ ವಿಶೇಷ ಪ್ರೋಮೋ ಅಭಿಮಾನಿಗಳ ಗಮನ ಸೆಳೆದಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಇನ್ಮುಂದೆ ದೇಶದ ಅಧಿಕೃತ ಸಮಯ ಒಂದೇ; ಭಾರತೀಯ ಪ್ರಮಾಣಿತ ಸಮಯಕ್ಕೆ ಹೊಸ ನಿಯಮ: ಭಾರತೀಯ ಪ್ರಮಾಣಿತ ಸಮಯ (IST) ಬಳಕೆಗೆ ಕೇಂದ್ರದ ಹೊಸ ನಿಯಮ. ‘ಒಂದು ರಾಷ್ಟ್ರ, ಒಂದು ಕಾಲ’ ಉಪಕ್ರಮದಡಿ ಬ್ಯಾಂಕಿಂಗ್, ರೈಲ್ವೆ, ದೂರಸಂಪರ್ಕ, ವಿದ್ಯುತ್ ಮತ್ತು ಡಿಜಿಟಲ್ ವ್ಯವಸ್ಥೆಗಳಲ್ಲಿ ಏಕರೂಪ ಸಮಯ ಉಲ್ಲೇಖಕ್ಕೆ ಒತ್ತು. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಬಾಗಲಕೋಟೆ ಜಿಲ್ಲೆಯಲ್ಲಿ ಬೆಂಕಿಯ ಕೆನ್ನಾಲಿಗೆ; 25ಕ್ಕೂ ಅಧಿಕ ಶೆಡ್‌ಗಳು ಭಸ್ಮ: ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಇದ್ದಲಗಿ ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ 25ಕ್ಕೂ ಅಧಿಕ ಶೆಡ್‌ಗಳು ಸುಟ್ಟು ಭಸ್ಮವಾಗಿವೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

‘ಮೈಸೂರು ಎಕ್ಸ್‌ಪ್ರೆಸ್’ ಜಾವಗಲ್ ಶ್ರೀನಾಥ್ ಅವರಿಗೆ ೫೭ನೇ ಜನ್ಮದಿನದ ಸಂಭ್ರಮ : ಬೆಂಗಳೂರು: ಭಾರತೀಯ ಕ್ರಿಕೆಟ್‌ನ ಸಾರ್ವಕಾಲಿಕ ಶ್ರೇಷ್ಠ ವೇಗದ ಬೌಲರ್, ಹೆಮ್ಮೆಯ ಕನ್ನಡಿಗ ಜಾವಗಲ್ ಶ್ರೀನಾಥ್ ಇಂದು (ಆಗಸ್ಟ್ 31) ತಮ್ಮ 57ನೇ ವಯಸ್ಸಿಗೆ ಕಾಲಿಟ್ಟಿದ್ದಾರೆ. 90ರ ದಶಕದಲ್ಲಿ ಭಾರತೀಯ ಬೌಲಿಂಗ್ ವಿಭಾಗದ ಬೆನ್ನೆಲುಬಾಗಿದ್ದ ‘ಮೈಸೂರು ಎಕ್ಸ್‌ಪ್ರೆಸ್’ ಖ್ಯಾತಿಯ ಶ್ರೀನಾಥ್, ಟೆಸ್ಟ್‌ನಲ್ಲಿ 236 ಹಾಗೂ ಏಕದಿನ ಕ್ರಿಕೆಟ್‌ನಲ್ಲಿ 315 ವಿಕೆಟ್ ಪಡೆದ ಅಪರೂಪದ ಸಾಧಕ. ಏಕದಿನ ಮಾದರಿಯಲ್ಲಿ 300ಕ್ಕೂ ಹೆಚ್ಚು ವಿಕೆಟ್ ಕಲೆಹಾಕಿದ ಭಾರತದ ಏಕೈಕ ವೇಗಿ ಎಂಬ ದಾಖಲೆ ಇವರ ಹೆಸರಲ್ಲಿದೆ. 2003ರ ವಿಶ್ವಕಪ್ ಬೆನ್ನಲ್ಲೇ ನಿವೃತ್ತರಾದ ಇವರು, ಪ್ರಸ್ತುತ ಐಸಿಸಿ (ICC) ಪಂದ್ಯದ ರೆಫರಿಯಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇಂದು ದೇಶಾದ್ಯಂತ ಕ್ರಿಕೆಟ್ ಅಭಿಮಾನಿಗಳು ಹಾಗೂ ಗಣ್ಯರು ಶ್ರೀನಾಥ್ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಕೋರುತ್ತಿದ್ದಾರೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರತಿ ಹೊಸ ಅಪ್‌ಡೇಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿರಿ 👉 ಇಂದಿನ ಪ್ರಮುಖ ಲೈವ್ ಅಪ್‌ಡೇಟ್‌ಗಳನ್ನು ‘ಸಂಯುಕ್ತ ಕರ್ನಾಟಕ’ ಜಾಲತಾಣದಲ್ಲಿ ನಿರಂತರವಾಗಿ ಓದಿರಿ.