ಗೃಹಬಳಕೆ ಸಿಲಿಂಡರ್ ಬೆಲೆಯಲ್ಲಿ ಈ ವರ್ಷದ ಆಗಸ್ಟ್‌ನಿಂದ ಯಾವುದೇ ಬದಲಾವಣೆಗಳು ಆಗಿಲ್ಲ
ನವದೆಹಲಿ: ಹೊಸ ವರ್ಷದ ಮೊದಲ ದಿನ ಎಲ್‌ಪಿಜಿ ದರ ತುಸು ಇಳಿಕೆಯಾಗಿದೆ.
ತೈಲ ಮಾರುಕಟ್ಟೆ ಕಂಪನಿಗಳು ಪ್ರತಿ ತಿಂಗಳ ಮೊದಲ ದಿನದಂದು ಎಲ್‌ಪಿಜಿ ಸಿಲಿಂಡರ್‌ಗಳನ್ನು ಪರಿಷ್ಕರಣೆ ಮಾಡುತ್ತವೆ. ಕಮರ್ಷಿಯಲ್ ಎಲ್‌ಪಿಜಿ ಸಿಲಿಂಡರ್ಗಳು ತುಸು ಅಗ್ಗಗೊಂಡಿವೆ. 19 ಕಿಲೋ ಕಮರ್ಷಿಯಲ್ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ 14.5 ರೂನಿಂದ 16 ರೂವರೆಗೆ ಇಳಿಕೆ ಆಗಿದೆ. ಬೆಂಗಳೂರಿನಲ್ಲಿ 14.5 ರೂನಷ್ಟು ಇಳಿಕೆ ಆಗಿದೆ. ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ಬೆಲೆಯಲ್ಲಿ ಬದಲಾವಣೆ ಆಗಿಲ್ಲ. ಹಳೆಯ ದರಗಳೇ ಮುಂದುವರಿಯಲಿವೆ. ಗೃಹಬಳಕೆ ಸಿಲಿಂಡರ್ ಬೆಲೆ ಈ ವರ್ಷದ ಆಗಸ್ಟ್‌ನಿಂದ ಯಾವುದೇ ಬದಲಾವಣೆಗಳು ಆಗಿಲ್ಲ. ಕಳೆದ 5 ತಿಂಗಳಿನಿಂದ ಗೃಹಬಳಕೆ ಸಿಲಿಂಡರ್ ಬೆಲೆ ಸ್ಥಿರವಾಗಿದೆ. ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆಯಾಗಿದ್ದು. ಹೊಸ ದರಗಳು ಇಂದಿನಿಂದಲೇ ಅನ್ವಯವಾಗಲಿವೆ.