ಬೆಂಗಳೂರು: ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ (MSME) ವಲಯವನ್ನು ಬಲಪಡಿಸುವ ನಿಟ್ಟಿನಲ್ಲಿ ಬೆಂಗಳೂರು ಅರಮನೆ ಮೈದಾನದ ತ್ರಿಪುರ ವಾಸಿನಿ ವೇದಿಕೆಯಲ್ಲಿ ಇಂದಿನಿಂದ ಜೂನ್ 1ರ ವರೆಗೆ ಆಯೋಜನೆಯಾಗಿರುವ ‘ಇಂಡಿಯಾ ಎಂಎಸ್ಎಂಇ ಸಮಾವೇಶ’ವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಉದ್ಘಾಟಿಸಿದ್ದಾರೆ
ಈ ಸಮಾವೇಶದಲ್ಲಿ 250ಕ್ಕೂ ಹೆಚ್ಚು ಪ್ರದರ್ಶಕರು ಪಾಲ್ಗೊಂಡಿದ್ದಾರೆ. ವ್ಯವಹಾರ ಸಭೆಗಳು, ಕೌಶಲ್ಯ ಅಭಿವೃದ್ಧಿ ಮತ್ತು ಪ್ರಮಾಣೀಕರಣ ಕಾರ್ಯಾಗಾರಗಳು ಮತ್ತು ಉದ್ಯಮ ತಜ್ಞರೊಂದಿಗೆ ಸಂವಾದ ಕಾರ್ಯಕ್ರಮಗಳು ನಡೆಯಲಿವೆ. ಜೊತೆಗೆ MSME ನೀತಿ ಬಗೆಗೆ ಚರ್ಚೆಗಳು ಮತ್ತು ಸ್ಥಳೀಯವಾಗಿ ತಯಾರಿಸಿದ ಉತ್ಪನ್ನಗಳ ಪ್ರಚಾರ ಕುರಿತು ವಿಶೇಷ ಗಮನ ಹರಿಸಲಾಗುವುದು.
ದಕ್ಷಿಣ ಭಾರತದ ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗಾಗಿ (SMEs) ಅತಿದೊಡ್ಡ ಕಾರ್ಯಕ್ರಮ ಇದಾಗಿದ್ದು, ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿ (KCCI), ಕರ್ನಾಟಕ ಸಣ್ಣ ಪ್ರಮಾಣದ ಕೈಗಾರಿಕೆಗಳ ಸಂಘ (KASSIA) ಮತ್ತು ಪೀಣ್ಯ ಕೈಗಾರಿಕೆಗಳ ಸಂಘ ಜಂಟಿಯಾಗಿ ಆಯೋಜಿಸಿದ್ದು, ಈ ಸಮಾವೇಶವು #MSME ಬೆಳವಣಿಗೆಗೆ ವೇಗವರ್ಧಕವಾಗುವ ನಿರೀಕ್ಷೆಯಿದೆ ಎಂದಿದ್ದಾರೆ.