NDA ನಿರ್ಧಾರಕ್ಕೆ ಬದ್ಧ

0
28

ಹುಬ್ಬಳ್ಳಿ: ಉಪ ಚುನಾವಣೆಗೆ ಸಂಬಂಧಿಸಿ ನಮಗೆ ಚನ್ನಪಟ್ಟಣ ಕ್ಷೇತ್ರದ ಬಗ್ಗೆ ಹಪಾಹಪಿ ಇಲ್ಲ. ಎನ್‌ಡಿಎ ಮುಖಂಡರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವು ಬದ್ಧ ಎಂದು ಯುವ ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ ಕುಮಾಎಸ್ವಾಮಿ ಹೇಳಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ಕ್ಷೇತ್ರಕ್ಕೆ ಸಂಬಂಧಿಸಿ ದೇವೇಗೌಡರು 62 ವರ್ಷಗಳಿಂದ ಕ್ಷೇತ್ರ ಉಳಿಸಿಕೊಂಡಿದ್ದಾರೆ. ಆದರೆ, ಇಂದು ಬೆಂಗಳೂರಿನಲ್ಲಿ ನಡೆಯುವ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಈ ವೇಳೆ ಅವರು ತೆಗೆದುಕೊಳ್ಳುವ ನಿರ್ಣಯಕ್ಕೆ ಬದ್ಧವಾಗಿದ್ದೇನೆ. ನಾನು ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುತಿದ್ದೇನೆ ಎಂದು ಹೇಳಿದರು. ಶಿಗ್ಗಾವಿ ಮತ್ತು ಸಂಡೂರು ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಗಳ ಗೆಲುವಿಗೆ ನಾವು ಶ್ರಮಿಸುತ್ತಿದ್ದೇವೆ ಎಂದರು.

Previous articleಪಾಸ್ ಪೋರ್ಟ್ ಮುಟ್ಟುಗೋಲು ಹಾಕಿಕೊಳ್ಳಲು ಮನವಿ
Next articleಸ್ಪರ್ಧಾತ್ಮಕತೆಯನ್ನು ಸರ್ಕಾರ ಕಡಿಮೆ ಮಾಡುತ್ತಿದೆ