NEET-PG 2024 ಆಗಸ್ಟ್ 11ಕ್ಕೆ ಪರೀಕ್ಷೆ

0
15

ನವದೆಹಲಿ: ನೀಟ್-ಪಿಜಿ 2024 ಪರೀಕ್ಷೆಯನ್ನು ಮುಂದೂಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ಆಗಸ್ಟ್ 11, 2024 ಕ್ಕೆ ನಿಗದಿಯಾಗಿರುವ ಪರೀಕ್ಷೆಯನ್ನು ಎರಡು ಬ್ಯಾಚ್‌ಗಳಲ್ಲಿ ನಡೆಸಲು ಮತ್ತು ಸಾಮಾನ್ಯೀಕರಣ ಸೂತ್ರವನ್ನು ಅನ್ವಯಿಸುವ ರಾಷ್ಟ್ರೀಯ ಪರೀಕ್ಷಾ ಮಂಡಳಿಯ ನಿರ್ಧಾರವನ್ನು ಪ್ರಶ್ನಿಸಿದ್ದರು. ಪೀಠವು ಅರ್ಜಿಯನ್ನು ಪರಿಗಣಿಸಲು ನಿರಾಕರಿಸಿತು. ಈಗ ಪಿಜಿ ಪರೀಕ್ಷೆಯನ್ನು ಮರುಹೊಂದಿಸಲು ದೇಶದಲ್ಲಿ ಹಲವು ಸಮಸ್ಯೆಗಳಿವೆ ಈಗ ನೀಟ್‌ ಪಿಜಿ ಪರೀಕ್ಷೆಯನ್ನೂ ಮತ್ತೆ ಮುಂದೂಡಬೇಕಾ” ಎಂದು ಅರ್ಜಿದಾರರ ಪರ ವಕೀಲರಿಗೆ ಕೋರ್ಟ್‌ ಪ್ರಶ್ನಿಸಿತು. ಆಗ ಅರ್ಜಿದಾರರ ಪರ ವಕೀಲ ಸಂಜಯ್‌ ಹೆಗ್ಡೆ, “ಇದುವರೆಗೆ ಒಮ್ಮೆ ಮಾತ್ರ ಪರೀಕ್ಷೆಯ ದಿನಾಂಕವನ್ನು ಮುಂದೂಡಲಾಗಿದೆ” ಎಂದು ತಿಳಿಸಿದರು. ಆಗ ನ್ಯಾಯಪೀಠವು, “ದೇಶಾದ್ಯಂತ 2 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೀಟ್‌ ಪಿಜಿ ಬರೆಯಲು ಸಜ್ಜಾಗಿದ್ದಾರೆ. ಆದರೆ, 2 ಲಕ್ಷ ಅಭ್ಯರ್ಥಿಗಳಲ್ಲಿ ಐವರು ಮಾತ್ರ ಅರ್ಜಿ ಸಲ್ಲಿಸಿದ್ದಾರೆ. ಪರೀಕ್ಷೆಯ ದಿನಾಂಕ ಮುಂದೂಡಲು ಆಗುವುದಿಲ್ಲ. ಅಷ್ಟಕ್ಕೂ, ಶೈಕ್ಷಣಿಕ ನೀತಿಯನ್ನು ನಾವು ಬದಲಿಸಲು ಸಾಧ್ಯವಿಲ್ಲ. ಇದು ಪರಿಪೂರ್ಣ ಜಗತ್ತು ಕೂಡ ಅಲ್ಲʼ ಎಂದು ಸ್ಪಷ್ಟಪಡಿಸಿತು.

Previous articleಕುಕ್ಕೆ ಸುಬ್ರಹ್ಮಣ್ಯದಲ್ಲಿ ನಾಗರಪಂಚಮಿ ಸಂಭ್ರಮ
Next articleಚೂಡಿ ಪೂಜೆ ಹಿಂದಿದೆ ಪ್ರಕೃತಿಯ ಪೂಜೆಯ ವಿಶಿಷ್ಟ ಪರಂಪರೆ…!