ನವದೆಹಲಿ: ನೀಟ್ ಸ್ನಾತಕೋತ್ತರ ಪರೀಕ್ಷೆಯನ್ನು ಒಂದೇ ಪಾಳಿಯಲ್ಲಿ ನಡೆಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.
ಜೂನ್ 15ರಂದು ನಡೆಯಲಿರುವ ನೀಟ್ ಸ್ನಾತಕೋತ್ತರ ಪರೀಕ್ಷೆಯನ್ನು ಎರಡು ಪಾಳಿಗಳ ಬದಲು ಒಂದೇ ಪಾಳಿಯಲ್ಲಿ ನಡೆಸುವಂತೆ ನ್ಯಾಯಮೂರ್ತಿ ವಿಕ್ರಂನಾಥ್ ನೇತೃತ್ವದ ಪೀಠ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಸಂಪೂರ್ಣ ಪರೀಕ್ಷಾ ಪ್ರಕ್ರಿಯೆಯನ್ನು ಪಾರದರ್ಶಕತೆಯಿಂದ ನಡೆಸುವಂತೆಯೂ ತಿಳಿಸಿದೆ. ನೀಟ್ ಸ್ನಾತಕೋತ್ತರ ಪರೀಕ್ಷೆಯಲ್ಲಿ ಪಾರದರ್ಶಕತೆಯ ಕೊರತೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಹಲವಾರು ಅರ್ಜಿಗಳು ಸಲ್ಲಿಕೆಯಾಗಿದ್ದವು. ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಫಲಿತಾಂಶ ಜುಲೈ 15 ರಂದು ಪ್ರಕಟವಾಗುವ ನಿರೀಕ್ಷೆಯಿದೆ.