Home ತಾಜಾ ಸುದ್ದಿ NEET-UG ಫಲಿತಾಂಶ ಪ್ರಕಟ

NEET-UG ಫಲಿತಾಂಶ ಪ್ರಕಟ

0

ಹೊಸದಿಲ್ಲಿ: ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯ ಫಲಿತಾಂಶಗಳನ್ನು ಎಲ್ಲಾ ವಿದ್ಯಾರ್ಥಿಗಳಿಗೆ, ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ನಗರ ಮತ್ತು ಕೇಂದ್ರವಾರು ಪ್ರಕಟಿಸಿದೆ.
NEET UG 2024 ಕ್ಕೆ ಹಾಜರಾದ ಅಭ್ಯರ್ಥಿಗಳು NTA NEET exams.nta.ac.in/NEET/ ಅಥವಾ neet.ntaonline.in ನ ಅಧಿಕೃತ ವೆಬ್‌ಸೈಟ್‌ನಲ್ಲಿ ತಮ್ಮ ಫಲಿತಾಂಶಗಳನ್ನು ಪರಿಶೀಲಿಸಬಹುದು. ಜುಲೈ 20 ರಂದು ಮಧ್ಯಾಹ್ನ 12 ಗಂಟೆಯೊಳಗೆ ನೀಟ್ ಯುಜಿ ಫಲಿತಾಂಶಗಳನ್ನು ಪ್ರಕಟಿಸಲು ಆದೇಶಿಸಿತ್ತು. ಸುಪ್ರೀಂ ಕೋರ್ಟ್​ ತನ್ನ ವೆಬ್‌ಸೈಟ್‌ನಲ್ಲಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಅಂಕಗಳನ್ನು ಪ್ರಕಟಿಸಲು ಎನ್​ಟಿಎಗೆ ಹೇಳಿತ್ತು. ಆದರೆ, ವಿದ್ಯಾರ್ಥಿಗಳ ಗುರುತನ್ನು ಬಹಿರಂಗಪಡಿಬಾರದು. ಇಂದು ಮಧ್ಯಾಹ್ನದೊಳಗೆ ನಗರ ಮತ್ತು ಕೇಂದ್ರವಾರು NEET ಯುಜಿ ಫಲಿತಾಂಶಗಳನ್ನು ಬಿಡುಗಡೆ ಮಾಡುವಂತೆ ಸಿಜೆಐ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರ ಪೀಠವು ಆದೇಶ ಹೊರಡಿಸಿತ್ತು.

Exit mobile version