PayCM ಅಭಿಯಾನಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ: ಗುಂಡೂರಾವ್‌

0
29
ದಿನೇಶ್ ಗುಂಡೂರಾವ್

PayCM ಅಭಿಯಾನ ಮುಖ್ಯಮಂತ್ರಿ ಬೊಮ್ಮಾಯಿ ಸರ್ಕಾರದ ಭ್ರಷ್ಟಾಚಾರದ ಮುಖವಾಡ ಕಳಚುವ ಪೋಸ್ಟರ್ ಹೊರತು ಇದಕ್ಕೆ ಇನ್ನೇನೋ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, ಬಿಜೆಪಿಯವರು ಈ ಅಭಿಯಾನವನ್ನು ಲಿಂಗಾಯತ ವಿರೋಧಿ ಎಂದು ಬ್ರ್ಯಾಂಡ್ ಮಾಡುತ್ತಿರುವುದು ಹತಾಶ ಮನಃಸ್ಥಿತಿಯ ಪ್ರತೀಕ. ಪೇ ಸಿಎಂ ಅಭಿಯಾನ ಅದ್ಹೇಗೆ ಲಿಂಗಾಯತ ವಿರೋಧಿ ಆಗುತ್ತದೆ? ಬಿಜೆಪಿ ಲಾಜಿಕ್ ಏನು? ಎಂದು ಪ್ರಶ್ನಿಸಿದ್ದಾರೆ.
ಬೊಮ್ಮಾಯಿ ಸರ್ಕಾರದ ಮೇಲಿರೋ ಭ್ರಷ್ಟಾಚಾರದ ಕಳಂಕದಿಂದ ಲಿಂಗಾಯತ‌ ಮತಗಳು ಕೈ ತಪ್ಪಿ ಹೋಗುವ ಆತಂಕ ಬಿಜೆಪಿಯವರನ್ನು ಕಾಡುತ್ತಿದೆ. ಹಾಗಾಗಿ ಬೊಮ್ಮಾಯಿಯವರು ಲಿಂಗಾಯತ ಕಾರ್ಡ್ ಬಳಸಿ ಅನುಕಂಪ ಗಿಟ್ಟಿಸುವ ಕೀಳು ತಂತ್ರಕ್ಕೆ ಬಿಜೆಪಿ ಮುಂದಾಗಿದೆ. ಭ್ರಷ್ಟಚಾರಿಗಳಿಗೆ ಯಾವುದೇ ಜಾತಿ-ಸಮೂದಾಯ ಇರುವುದಿಲ್ಲ. ಭ್ರಷ್ಟರದ್ದೇ ಒಂದು ಜಾತಿ. ಅದರ ಹೆಸರೇ ಬಿಜೆಪಿ ಎಂದಿದ್ದಾರೆ.
ಬೊಮ್ಮಾಯಿ ವಿರುದ್ಧದ ಪೇಸಿಎಂ ಅಭಿಯಾನವನ್ನು ಲಿಂಗಾಯತ ವಿರೋಧಿ ಎಂಬಂತೆ ಬಿಂಬಿಸಿ ಬಿಜೆಪಿ ಸತ್ಯವನ್ನು ಡೈವರ್ಟ್ ಮಾಡುತ್ತಿದೆ. ಆದರೆ ಬಿಜೆಪಿಯವರಷ್ಟು ಲಿಂಗಾಯತ ವಿರೋಧಿಗಳು ಯಾರಿದ್ದಾರೆ? ಲಿಂಗಾಯತ ಸಮುದಾಯದ ಪ್ರಶ್ನಾತೀತ ನಾಯಕ ಯಡಿಯೂರಪ್ಪರನ್ನು ಸಿಎಂ ಪದವಿಯಿಂದ ಕೆಳಗಿಳಿಸಿ ಕಣ್ಣೀರು ಹಾಕಿಸಿದ್ದು ಲಿಂಗಾಯತ ಸಮುದಾಯಕ್ಕೆ ಮಾಡಿದ ದ್ರೋಹವಲ್ಲವೆ? ಎಂದು ಅವರು ಬರೆದುಕೊಂಡಿದ್ದಾರೆ.

Previous articleರಾಷ್ಟ್ರಪತಿಗೆ ಬುಡಕಟ್ಟು ನೃತ್ಯದ ಸ್ವಾಗತ
Next articleಕಪ್ಪು ಬಾವುಟ ಪ್ರದರ್ಶನ