SK Home Ad
Home ಸುದ್ದಿ ಬೆಂಗಳೂರಿನ ಹಲವೆಡೆ ಇಂದು ವಿದ್ಯುತ್ ವ್ಯತ್ಯಯ; 75ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಕರೆಂಟ್ ಕಟ್!

ಬೆಂಗಳೂರಿನ ಹಲವೆಡೆ ಇಂದು ವಿದ್ಯುತ್ ವ್ಯತ್ಯಯ; 75ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಕರೆಂಟ್ ಕಟ್!

0
1

ಬೆಂಗಳೂರು:  ರಾಜಧಾನಿ ಬೆಂಗಳೂರಿನ ಹಲವು ಪ್ರದೇಶಗಳ ನಿವಾಸಿಗಳಿಗೆ ಇಂದು (ನ.29) ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ವಿವಿಧ ವಿದ್ಯುತ್ ಉಪಕೇಂದ್ರಗಳಲ್ಲಿ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನಗರದ 75ಕ್ಕೂ ಹೆಚ್ಚು ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗುವ ಸಾಧ್ಯತೆಯಿದೆ.

ಯಾವ ಪ್ರದೇಶಗಳಲ್ಲಿ ಎಷ್ಟು ಗಂಟೆ ವಿದ್ಯುತ್ ವ್ಯತ್ಯಯ?

ಪೀಣ್ಯ 10ನೇ ಮತ್ತು 11ನೇ ಮುಖ್ಯರಸ್ತೆ, ಉಡುಪಿ ಹೋಟೆಲ್ ಪ್ರದೇಶ, ಲಕ್ಷ್ಮೀದೇವಿ ನಗರ, ಲಗ್ಗರೆ ಹಳೆ ಗ್ರಾಮ, ಲವಕುಶ ನಗರ, ರಾಜೀವ್ ಗಾಂಧಿ ನಗರ, ಚೌಡೇಶ್ವರಿ ನಗರ, ಪೀಣ್ಯ ಕೈಗಾರಿಕಾ ಪ್ರದೇಶ 1ನೇ ಹಂತ, ಟಿವಿಎಸ್ ಕ್ರಾಸ್ ರಸ್ತೆ, ಇಸ್ರೋ 1ನೇ ಮತ್ತು 2ನೇ ಕ್ರಾಸ್, ಪೀಣ್ಯ 4ನೇ ಹಂತ, ಯಶವಂತಪುರ, ಜಾಲಹಳ್ಳಿ ಕ್ರಾಸ್, ಚೊಕ್ಕಸಂದ್ರ, ಮಾರುತಿ ಲೇಔಟ್, ಕೆಂಪಯ್ಯ ಲೇಔಟ್, ಗಣಪತಿನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಜತೆಗೆ, ಗೃಹಲಕ್ಷ್ಮಿ ಅಪಾರ್ಟ್‌ಮೆಂಟ್, ಎಸ್‌ಎಂ ರಸ್ತೆ, ಜಾಲಹಳ್ಳಿ ಕ್ರಾಸ್, ಚೊಕ್ಕಸಂದ್ರ, ಮಾರುತಿ ಲೇಔಟ್, ಕೆಂಪಯ್ಯ ಲೇಔಟ್, ಜಿ.ಜಿ ಪಾಳ್ಯ, ಇಸ್ರೋ, ನಾರಾಯಣಪುರ, ಎನ್.ಟಿ.ಟಿ.ಎಫ್ ಸರ್ಕಲ್, ಗಣಪತಿನಗರ ಮುಖ್ಯರಸ್ತೆ, ಪೊಲೀಸ್ ಠಾಣೆ ರಸ್ತೆ, ಚಾಮುಂಡಿಪುರ, ರಾಜೇಶ್ವರಿನಗರ, ಆಕಾಶ್ ಥಿಯೇಟರ್ ರಸ್ತೆ, ವಿ ಇಗ್ನಾನ ಪಬ್ಲಿಕ್ ಸರ್ಕಲ್ ರಸ್ತೆ, ಭೈರವೇಶ್ವರ ನಗರ, ಬ್ಯಾಂಕ್ ಕಾಲೋನಿ, ಮುನೇಶ್ವರ ಲೇಔಟ್, ಎಫ್‌ಎಫ್ ಲೇಔಟ್, ಎನ್‌ಎಸ್ ಬಡಾವಣೆ ಮತ್ತು ಕೆಜಿ ಲೇಔಟ್ 

ನಿರ್ವಹಣಾ ಕಾಮಗಾರಿ ಹಿನ್ನೆಲೆ

ಪೀಣ್ಯ 220/66/11 ಕೆ.ವಿ. ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಾಗೂ ಎಂಜಿ ರಸ್ತೆ ವ್ಯಾಪ್ತಿಯ ಬಿ ಸ್ಟೇಷನ್‌ನ 20 ಎಂವಿಎ ಪವರ್ ಟ್ರಾನ್ಸ್‌ಫಾರ್ಮರ್-3ರಲ್ಲಿ ನಿರ್ವಹಣೆ ಮತ್ತು ಪರೀಕ್ಷಾ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ವಿದ್ಯುತ್ ಕಡಿತದ ಸಮಯದಲ್ಲಿ ಸಾರ್ವಜನಿಕರು ಮತ್ತು ವ್ಯಾಪಾರಸ್ಥರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಕಾಮಗಾರಿಯ ಅವಧಿಯನ್ನು ಅವಲಂಬಿಸಿ ವಿದ್ಯುತ್ ಪೂರೈಕೆ ಸಮಯದಲ್ಲಿ ಬದಲಾವಣೆಯಾಗುವ ಸಾಧ್ಯತೆಯೂ ಇದೆ.