Home News RCB ಅಭಿಮಾನಿಗಳ ಕಾಲ್ತುಳಿತ ಪ್ರಕರಣ: ಮೃತರ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರ ಮೊತ್ತ 25 ಲಕ್ಷ ರೂ.ಗಳಿಗೆ...

RCB ಅಭಿಮಾನಿಗಳ ಕಾಲ್ತುಳಿತ ಪ್ರಕರಣ: ಮೃತರ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರ ಮೊತ್ತ 25 ಲಕ್ಷ ರೂ.ಗಳಿಗೆ ಹೆಚ್ಚಳ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಮೃತರಾದವರ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರವನ್ನು ತಲಾ ರೂ.10 ಲಕ್ಷದಿಂದ 25 ಲಕ್ಷ ರೂ.ಗಳಿಗೆ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ.
ಈ ಮೊದಲು ತಲಾ ಹತ್ತು ಲಕ್ಷ ರೂ.ಗಳ ಪರಿಹಾರವನ್ನು ಸರ್ಕಾರ ಘೋಷಿಸಿತ್ತು, ಮೃತರ ಕುಟುಂಬಗಳಿಗೆ ಪರಿಹಾರ ಧನ ಹೆಚ್ಚಳ ಮಾಡುವಂತೆ ಪ್ರತಿಪಕ್ಷಗಳು ಆಗ್ರಹಿಸಿದ್ದವು. ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಹಾರ ಹೆಚ್ಚಳ ಮಾಡಿ ಆದೇಶ ಹೊರಡಿಸಿದ್ದಾರೆ.
ಈ ಮಧ್ಯೆ ಘಟನೆಗೆ ಸಂಬಂಧಿಸಿ ತ್ವರಿತವಾಗಿ ತನಿಖೆ ಪೂರ್ಣಗೊಳಿಸುವ ಸಲುವಾಗಿ ನಿವೃತ್ತ ನ್ಯಾಯಮೂರ್ತಿ ಜಾನ್‌ ಮೈಕಲ್‌ ಡಿ.ಕುನ್ಹಾ ನೇತೃತ್ವದಲ್ಲಿ ನಡೆಯುತ್ತಿದ್ದ ಚಾಮರಾಜನಗರ ಆಕ್ಸಿಜನ್‌ ದುರಂತ ಕುರಿತ ವಿಚಾರಣಾ ಆಯೋಗದ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.

Exit mobile version