RCB ಅಭಿಮಾನಿಗಳ ಕಾಲ್ತುಳಿತ ಪ್ರಕರಣ: ಮೃತರ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರ ಮೊತ್ತ 25 ಲಕ್ಷ ರೂ.ಗಳಿಗೆ ಹೆಚ್ಚಳ

0
28

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಮೃತರಾದವರ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರವನ್ನು ತಲಾ ರೂ.10 ಲಕ್ಷದಿಂದ 25 ಲಕ್ಷ ರೂ.ಗಳಿಗೆ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ.
ಈ ಮೊದಲು ತಲಾ ಹತ್ತು ಲಕ್ಷ ರೂ.ಗಳ ಪರಿಹಾರವನ್ನು ಸರ್ಕಾರ ಘೋಷಿಸಿತ್ತು, ಮೃತರ ಕುಟುಂಬಗಳಿಗೆ ಪರಿಹಾರ ಧನ ಹೆಚ್ಚಳ ಮಾಡುವಂತೆ ಪ್ರತಿಪಕ್ಷಗಳು ಆಗ್ರಹಿಸಿದ್ದವು. ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಹಾರ ಹೆಚ್ಚಳ ಮಾಡಿ ಆದೇಶ ಹೊರಡಿಸಿದ್ದಾರೆ.
ಈ ಮಧ್ಯೆ ಘಟನೆಗೆ ಸಂಬಂಧಿಸಿ ತ್ವರಿತವಾಗಿ ತನಿಖೆ ಪೂರ್ಣಗೊಳಿಸುವ ಸಲುವಾಗಿ ನಿವೃತ್ತ ನ್ಯಾಯಮೂರ್ತಿ ಜಾನ್‌ ಮೈಕಲ್‌ ಡಿ.ಕುನ್ಹಾ ನೇತೃತ್ವದಲ್ಲಿ ನಡೆಯುತ್ತಿದ್ದ ಚಾಮರಾಜನಗರ ಆಕ್ಸಿಜನ್‌ ದುರಂತ ಕುರಿತ ವಿಚಾರಣಾ ಆಯೋಗದ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.

Previous articleಮದುವೆಯ ದಿಬ್ಬಣದ ಮೇಲೆ ಜೇನ್ನೊಣಗಳ ದಾಳಿ
Next articleಯಕ್ಷಗಾನ ಕಲಾವಿದ ಮುಂಡಾಜೆ ಸದಾಶಿವ ಶೆಟ್ಟಿ ನಿಧನ