ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರಾಟ್ ಕೊಹ್ಲಿ ಹಾಗೂ ಮಾಜಿ ಆಟಗಾರರಾದ ಎಬಿ ಡಿವಿಲಿಯರ್ಸ್ ಹಾಗೂ ಕ್ರಿಸ್ ಗೇಲ್ ದಿಗ್ಗಜರು ಸೇರಿ ಈ ಸಲ ಕಪ್ ನಮ್ದು ಅಂತ ಕನ್ನಡದಲ್ಲಿ ಹೇಳುವ ಮೂಲಕ ಕೋಟ್ಯಾಂತರ ಅಭಿಮಾನಿಗಳ ಮನ ಗೆದ್ದಿದ್ದಾರೆ, ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್ ಹಾಗೂ ಕ್ರಿಸ್ ಗೇಲ್ ಜೊತೆಯಾಗಿ ಈ ಸಲ ಕಪ್ ನಮ್ದು ಎನ್ನುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳಿಂದ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.