Home ತಾಜಾ ಸುದ್ದಿ RCB ಸಂಭ್ರಮಾಚರಣೆಗೆ ಜನಸಾಗರ: ಕಾಲ್ತುಳಿತ ಹಲವರ ಸ್ಥಿತಿ ಗಂಭೀರ..

RCB ಸಂಭ್ರಮಾಚರಣೆಗೆ ಜನಸಾಗರ: ಕಾಲ್ತುಳಿತ ಹಲವರ ಸ್ಥಿತಿ ಗಂಭೀರ..

0

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಬರುತ್ತಿದ್ದಂತೆ ಅಭಿಮಾನಿಗಳ ಸಂಭ್ರಮಾಚರಣೆ ವೇಳೆ ಹಲವು ಅವಘಡಗಳು ಸಂಭವಿಸಿದ್ದು ತಳ್ಳಾಟ, ನೂಕುನುಗ್ಗಲು, ಲಾಠಿ ಚಾರ್ಜ್ ಸೇರಿದಂತೆ ಹಲವು ಘಟನೆಗಳು ನಡೆದಿದ್ದು, ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಾವಿರಾರು ಸಂಖ್ಯೆಯಲ್ಲಿ ಆರ್‌ಸಿಬಿ ಅಭಿಮಾನಿಗಳು ಕಿಕ್ಕಿರಿದು ಜಮಾಯಿಸಿದ್ದರು. ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ನಿಖರವಾಗಿಲ್ಲ. ಈ ನಡುವೆ ರಾಜ್ಯ ಸರ್ಕಾರ ಕೂಡಲೇ ಮುಂದಿನ ಆರ್‌ಸಿಬಿ ಸಂಭ್ರಮಾಚರಣೆಯನ್ನು ಕೂಡಲೇ ರದ್ದು ಮಾಡಬೇಕು ನಿರ್ಲಕ್ಷಿಸಿದರೆ ಹೆಚ್ಚಿನ ಅಪಾಯ ಆಗುವ ಸಂಭವ ಇರುತ್ತದೆ ಎಂದು ಆಗ್ರಹಿಸಿದ್ದಾರೆ. ಕಾಲ್ತುಳಿತದಲ್ಲಿ 15ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದು, ಆರಕ್ಕೂ ಹೆಚ್ಚು ಆರ್​ಸಿಬಿ ಅಭಿಮಾನಿಗಳ ಸ್ಥಿತಿ ಗಂಭೀರವಾಗಿದೆ. ಅಸ್ವಸ್ಥಗೊಂಡವರನ್ನು ಶಿವಾಜಿನಗರದಲ್ಲಿರುವ ಬೌರಿಂಗ್ ಮತ್ತು ​ಲೇಡಿ ಕರ್ಜನ್ ಆಸ್ಪತ್ರೆ ಆಸ್ಪತ್ರೆಗೆ ದಾಖಲಿಸಲಾಗಿದೆ. 10 ಕ್ಕೂ ಹೆಚ್ಚು ಅಭಿಮಾನಿಗಳು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Exit mobile version