ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಬರುತ್ತಿದ್ದಂತೆ ಅಭಿಮಾನಿಗಳ ಸಂಭ್ರಮಾಚರಣೆ ವೇಳೆ ಕೆಲ ಅವಘಡಗಳು ನಡೆದಿವೆ.
ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭಿಮಾನಿಗಳ ಸಾಗರವೇ ಹರಿದು ಬಂದಿದ್ದು ಕ್ರಿಡಾಂಗಣದ 18, 19, ಮತ್ತು 20ನೇ ಗೇಟ್ ಓಪನ್ ಆಗುತ್ತಿದ್ದಂತೆ ಅಭಿಮಾನಿಗಳು ಏಕಾಏಕಿ ಒಳನುಗ್ಗಿದ್ದು, ತಳ್ಳಾಟ, ನೂಕುನುಗ್ಗಲು ಉಂಟಾಗಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಗೇಟ್ ಬಳಿ ನೂಕು ನುಗ್ಗಲು ಉಂಟಾಗಿದ್ದು, ಯುವಕನೋರ್ವನಿಗೆ ಕಾಲು ಮುರಿತವಾಗಿದೆ. ಗೇಟ್ ನಂಬರ್ 6ರ ಬಳಿ ಗೇಟ್ ಹತ್ತಲು ಹೋದ ಯುವಕ ಬಿದ್ದು ಕಾಲು ಮುರಿದುಕೊಂಡಿದ್ದಾನೆ. ನೂಕುನುಗ್ಗಲಿನಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರನ್ನು ಪೊಲೀಸರು ತಮ್ಮ ಜೀಪ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಇದೇ ವೇಳೆ ಗೇಟ್ ನಂಬರ್ 12ರಲ್ಲಿ ಮಹಿಳಾ ಅಭಿಮಾನಿಯೊಬ್ಬರು ಕುಸಿದುಬಿದ್ದಿದ್ದಾರೆ. ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.