ಬೆಳಗಾವಿ: ಆರ್‌ಸಿಬಿ ಗೆಲುವಿನ ಸಂಭ್ರಮದ ವಿಜಯೋತ್ಸವದ ವೇಳೆ ಅಭಿಮಾನಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.
ಜಿಲ್ಲೆಯ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದಲ್ಲಿ ಈ ಘಟನೆ ನಡೆದಿದೆ, ಮಂಜುನಾಥ್ ಕುಂಬಾರ(25) ಸಾವನ್ನಪ್ಪಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಐಪಿಎಲ್ ಗೆಲುವಿನ ಸಂಭ್ರಮದ ವೇಳೆ ಮಂಜುನಾಥ್ ಟ್ರ‍್ಯಾಕ್ಟರ್‌ನಲ್ಲಿ ಹಾಡು ಹಾಕಿ ಕುಣಿಯುತ್ತಿದ್ದಾಗ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಮಾರ್ಗ ಮಧ್ಯೆ ಮಂಜುನಾಥ್ ಸಾವನ್ನಪ್ಪಿದ್ದಾನೆ, ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.