ಬೆಂಗಳೂರು: ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದ ಹಿನ್ನೆಲೆಯಲ್ಲಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ತಡೆ ಕೋರಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಪದಾಧಿಕಾರಿಗಳು ಹೈಕೋರ್ಟ್ ಮೆಟ್ಟಿಲೇರಿತ್ತು.
ಈ ಪ್ರಕರಣದಲ್ಲಿ ಕೆಎಸ್‌ಸಿಎಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದ್ದು, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ವಿರುದ್ಧ ಬಲವಂತದ ಕ್ರಮ ಬೇಡ ಎಂದು ಹೈಕೋರ್ಟ್ ಏಕಸದಸ್ಯ ಪೀಠವು ಶುಕ್ರವಾರ ಮಧ್ಯಂತರ ಆದೇಶ ಹೊರಡಿಸಿದೆ. ಸರ್ಕಾರದ ಪರವಾಗಿ ವಾದಿಸುತ್ತಿರುವ ಅಡ್ವೊಕೇಟ್ ಜನರಲ್ ಕೆ ಶಶಿಕಿರಣ್ ಶೆಟ್ಟಿ ಹಾಗೂ ಅರ್ಜಿದಾರರ ಪರವಾಗಿ ಹಿರಿಯವ ವಕೀಲ ಎಂ ಎಸ್ ಶ್ಯಾಮ್‌ಸುಂದರ್ ಮತ್ತು ಅಶೋಕ್ ಹಾರನಹಳ್ಳಿ ವಾದ ಮಂಡನೆ ಮಾಡಿದರು, ಮೂರು ಎಫ್‌ಐಆರ್‌ನಲ್ಲಿ ಆರೋಪಿಗಳ ವಿರುದ್ಧ ಯಾವುದೇ ತೆರನಾದ ಬಲವಂತದ ಕ್ರಮಕೈಗೊಳ್ಳಬಾರದು. ಅರ್ಜಿದಾರರು/ಆರೋಪಿಗಳು ನ್ಯಾಯಾಲಯದ ವ್ಯಾಪ್ತಿ ತೊರೆಯುವಂತಿಲ್ಲ. ವಿಚಾರಣೆಯನ್ನು ೧೬ಕ್ಕೆ ಮುಂದೂಡಿ ಪೀಠ ಆದೇಶಿಸಿದೆ.