14 ಸಾವಿರಕ್ಕೆ ಹೆಣ್ಣು ಮಗು ಮಾರಾಟ

0
42

ಮೈಸೂರು: 14 ಸಾವಿರಕ್ಕೆ ಹೆಣ್ಣು ಮಗು ಮಾರಾಟ ಮಾಡಿದ ಪ್ರಕರಣಕ್ಕೆ ಸಂಬದಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ.
ನಂಜನಗೂಡಿನ ನೀಲಕಂಠ ನಗರದ ಅನಿಲ್ ಕುಮಾರ್ ಹಾಗೂ ಸೌಮ್ಯ ದಂಪತಿಗೆ ಮೂರನೇಯ ಮಗುವು ಹೆಣ್ಣಾಗಿದ್ದರಿಂದ ಮಾರಾಟ ಮಾಡಿದ ಆರೋಪ ಕೇಳಿಬಂದಿದೆ. ಗುಂಡ್ಲುಪೇಟೆ ನಿವಾಸಿಗೆ ಮಗು ಮಾರಾಟ ಮಾಡಿದ್ದು, ಈ ಕುರಿತಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ದೂರು ಬಂದಿತ್ತು, ಇನ್ನು ಈ ವಿಷಯದ ಕುರಿತು ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿಗೆ ಅಂಗನವಾಡಿ ಕಾರ್ಯಕರ್ತೆ ಮಾಹಿತಿ ನೀಡಿದ್ದಾರೆ, ಮಾರಾಟವಾದ ಮಗುವನ್ನು ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ . ಈ ಬಗ್ಗೆ ಇನ್ನು ಪೊಲೀಸರು ದೂರು ದಾಖಲಿಸಿಕೊಂಡಿಲ್ಲ ಎಂದು ತಿಳಿದು ಬಂದಿದೆ.

Previous articleಹಿರಿಯ ರಾಜಕಾರಣಿ ಶಿವಮಲ್ಲಪ್ಪ ನಿಧನ
Next articleಕಲ್ಲೂರು ದೇವಸ್ಥಾನದಲ್ಲಿ 30 ಲಕ್ಷ ಮೌಲ್ಯದ ಚಿನ್ನಾಭರಣ ಕಳವು