Home ತಾಜಾ ಸುದ್ದಿ SSLC ಪರೀಕ್ಷೆ 2 ಫಲಿತಾಂಶ ಪ್ರಕಟ

SSLC ಪರೀಕ್ಷೆ 2 ಫಲಿತಾಂಶ ಪ್ರಕಟ

0

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯು SSLC ಪೂರಕ ಪರೀಕ್ಷೆ (ಪರೀಕ್ಷೆ-2) ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದೆ.
ಈ ಪೂರಕ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳನ್ನು ಆಧಿಕೃತ ವೆಬ್‌ಸೈಟ್ karresults.nic.in ನಲ್ಲಿ ಪರಿಶೀಲಿಸಬಹುದು. ಈ ವರ್ಷ SSLC ಪೂರಕ ಪರೀಕ್ಷೆ 2025ರ ಮೇ 26ರಿಂದ ಜೂನ್ 2ರವರೆಗೆ ನಡೆದಿದ್ದವು, ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ (KSEAB) ಏಪ್ರಿಲ್ 30, 2025 ರಂದು SSLC (10ನೇ ತರಗತಿ) ಪರೀಕ್ಷೆ 1ನೇ ಹಂತದ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿತು. ಈ ಬಾರಿ ಒಟ್ಟು 8,42,173 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಅವರಲ್ಲಿ 5,24,984 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಒಟ್ಟಾರೆ ಉತ್ತೀರ್ಣ ಶೇಕಡಾ 62.34% ದಾಖಲಾಗಿತ್ತು. ಹುಡುಗರು 58.07% ಮತ್ತು ಹುಡುಗಿಯರು 74% ಫಲಿತಾಂಶ ದಾಖಲಿಸಿದ್ದರು. 2025ರ ಪರೀಕ್ಷೆ-2ರಲ್ಲಿ 11,818 ವಿದ್ಯಾರ್ಥಿಗಳು ಫಲಿತಾಂಶ ಉತ್ತಮಪಡಿಸಿಕೊಳ್ಳಲು ನೋಂದಾಯಿಸಿದ್ದು, ಅವರಲ್ಲಿ 6,635 ವಿದ್ಯಾರ್ಥಿಗಳು (ಶೇ.56.14ರಷ್ಟು ವಿದ್ಯಾರ್ಥಿಗಳು) ತಮ್ಮ ಫಲಿತಾಂಶವನ್ನು ಉತ್ತಮಪಡಿಸಿಕೊಂಡಿದ್ದಾರೆ. ಅಂಕ ಹೆಚ್ಚಳಕ್ಕೆ ಪರೀಕ್ಷೆ ಬರೆದಿದ್ದ ನಾಲ್ವರಿಗೆ ಔಟ್‌ ಆಫ್ ಔಟ್ ಅಂಕ ಬಂದಿದೆ.​ ಕರ್ನಾಟಕದ 967 ಕೇಂದ್ರಗಳಲ್ಲಿ ಮೇ 26ರಿಂದ ಜೂನ್ 2ರವರೆಗೆ ಎಸ್​ಎಸ್​ಎಲ್​ ಪರೀಕ್ಷೆ-2 ನಡೆದಿತ್ತು.

ಕಲ್ಯಾಣ ಕರ್ನಾಟಕದಲ್ಲಿ ಸಂಯುಕ್ತ ಕರ್ನಾಟಕ ಬೆಳ್ಳಿ ಹಬ್ಬ

Exit mobile version