Home ತಾಜಾ ಸುದ್ದಿ SSLC: ಪ್ರಥಮ ಸ್ಥಾನ ಪಡೆದ ಅಂಕಿತಾಳಿಗೆ ಸಚಿವರಿಂದ ಸನ್ಮಾನ

SSLC: ಪ್ರಥಮ ಸ್ಥಾನ ಪಡೆದ ಅಂಕಿತಾಳಿಗೆ ಸಚಿವರಿಂದ ಸನ್ಮಾನ

0

ಬೆಂಗಳೂರು: ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಕುಮಾರಿ ಅಂಕಿತಾಳಿಗೆ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರು ಸನ್ಮಾನ ಮಾಡಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಈ ಬಾರಿಯ SSLC ಪರೀಕ್ಷೆಯಲ್ಲಿ 625 ಕ್ಕೆ 625 ಅಂಕಗಳನ್ನು ಗಳಿಸಿ ರಾಜ್ಯಕ್ಕೇ ಪ್ರಥಮ ಸ್ಥಾನ ಗಳಿಸಿದ ನಮ್ಮ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಕುಮಾರಿ ಅಂಕಿತಾ ಅವರನ್ನು ಸನ್ಮಾನಿಸಿ ಮಗುವಿನ ಉನ್ನತ ವ್ಯಾಸಾಂಗಕ್ಕೆ ಎಲ್ಲ ರೀತಿಯ ನೆರವನ್ನು ನೀಡುವುದಾಗಿ ಈ ವೇಳೆ ಮಗುವಿಗೆ ತಿಳಿಸಿದ್ದಾರೆ.

ಪ್ರಥಮ ಸ್ಥಾನ ಪಡೆದ ಅಂಕಿತಾಳಿಗೆ ಸಚಿವರಿಂದ ಸನ್ಮಾನ

Exit mobile version