ಬೆಂಗಳೂರು: ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ 2025 ಇಂದು ಪ್ರಕಟವಾಗಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿದ್ದು ಅವರು ಫಲಿತಾಂಶ ಪ್ರಕಟಿಸಿಲಿದ್ದಾರೆ. ವಿದ್ಯಾರ್ಥಿಗಳು ಮಂಡಳಿಯ ಅಧಿಕೃತ ವೆಬ್‌ಸೈಟ್ ಮೂಲಕ ಮಧ್ಯಾಹ್ನ 12.30ರ ಬಳಿಕ https://karresults.nic.in ನಲ್ಲಿ ಫಲಿತಾಂಶ ವೀಕ್ಷಿಸಬಹುದು.
ಮಾರ್ಚ್, ಏಪ್ರಿಲ್ ತಿಂಗಳಲ್ಲಿ ನಡೆದಿದ್ದ ಪರೀಕ್ಷೆಗೆ 8,96,447 ವಿದ್ಯಾರ್ಥಿಗಳು ಹಾಜರಾಗಿದ್ದರು. 15,881 ಶಾಲೆಗಳ ವಿದ್ಯಾರ್ಥಿಗಳು 2,818 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದರು.
ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಆನ್ಲೈನ್ನಲ್ಲಿ ನೋಡಲು kseab.karnataka.gov.in ಅಥವಾ karresults.nic.in ನಲ್ಲಿ ಪರಿಶೀಲಿಸಬಹುದು.