SSLC ವಿದ್ಯಾರ್ಥಿಗಳಿಗೆ ಗ್ರೇಸ್​ ಮಾರ್ಕ್ಸ್ ಇಲ್ಲ

0
9

ಬೆಂಗಳೂರು: 10ನೇ ತರಗತಿ ವಿದ್ಯಾರ್ಥಿಗಳಿಗೆ ಮುಂದಿನ‌ ವರ್ಷದಿಂದ ಗ್ರೇಸ್​ ಮಾರ್ಕ್ಸ್​​ ಇರುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ರಾಜ್ಯ ಸರಕಾರ ಮುಂದಿನ ವರ್ಷದಿಂದ 10 ನೇ ತರಗತಿ ಪರೀಕ್ಷೆಯ ವಿದ್ಯಾರ್ಥಿಗಳಿಗೆ ನೀಡುವ ಗ್ರೇಸ್‌ ಅಂಕ ವ್ಯವಸ್ಥೆಯನ್ನು ರದ್ದುಗೊಳಿಸುವ ಕುರಿತು ನಿರ್ಧಾರ ಮಾಡಿದೆ. ಹೀಗಾಗಿ ಮುಂದಿನ ವರ್ಷದಿಂದ 10ನೇ ತರಗತಿ ಮಕ್ಕಳಿಗೆ ಗ್ರೇಸ್​ ಮಾರ್ಕ್ಸ್​​ ನೀಡುವುದಿಲ್ಲ ಎಂದರು.

Previous articleವಿಚಾರಧಾರೆ ಹೆಸರಿನಲ್ಲಿ ಮಾಫಿಯಾ ಷಡ್ಯಂತರ
Next articleಈ ಆಕಾರಕ್ಕೆ ಕೇಂದ್ರ ಸಚಿವರೇ ಕಾರಣ…