ಕೌಲಾಲಂಪುರ್: ಅಂಡರ್-19 ಮಹಿಳಾ ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ.
ಇಂದು ನಡೆದ ಬಾಂಗ್ಲಾದೇಶ್ ವಿರುದ್ದ ನಡೆದ ಫೈನಲ್ ಪಂದ್ಯದಲ್ಲಿ ಪಂದ್ಯದಲ್ಲಿ ಭಾರತ ವನಿತಾ ಅಂಡರ್ 19 ತಂಡವು 41 ರನ್ ಅಂತರದ ಗೆಲುವು ಸಾಧಿಸಿದೆ. ಮೊದಲು ಬ್ಯಾಟ್ ಮಾಡಿದ ಭಾರತ ತಂಡವು 20 ಓವರ್‌ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 117 ರನ್‌ಗಳಿಸಿತು, ಬಾಂಗ್ಲಾದೇಶ ತಂಡವು 18.3 ಓವರ್ 76 ರನ್‌ಗಳಿಗೆ ಆಲೌಟಾಯಿತು. ಈ ಮೂಲಕ ಟೀಮ್ ಇಂಡಿಯಾ 41 ರನ್ಗಳ ಜಯ ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.
