ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗ 2024ರ ನಾಗರಿಕ ಸೇವೆಗಳ ಪರೀಕ್ಷೆಯ ಅಂತಿಮ ಫಲಿತಾಂಶದಲ್ಲಿ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಕೋಡಿಯಾಲ ಹೊಸಪೇಟೆ ಗ್ರಾಮದ ನಿವಾಸಿ ಸಚಿನ್ ಬಸವರಾಜ ಗುತ್ತೂರು ಅವರು ಯುಪಿಎಸ್ಸಿ ಪರೀಕ್ಷೆಯಲ್ಲಿ 41ನೇ ರ‍್ಯಾಂಕ್ ಪಡೆದ್ದಾರೆ. ಸಾಗರದ ಕಾಗೋಡು ತಿಮ್ಮಪ್ಪ ನಗರದ ಅಣಲೆಕೊಪ್ಪ ಬಡಾವಣೆ ನಿವಾಸಿ ವಿ. ವಿಕಾಸ್ ಪರೀಕ್ಷೆಯಲ್ಲಿ 288ನೇ ಬ್ಯಾಂಕ್ ಪಡೆದಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಅಕ್ಕಿಮರಡಿ ಗ್ರಾಮದ ಪಾಂಡುರಂಗ ಸದಾಶಿವ ಕಂಬಳಿ 529ನೇ ರ‍್ಯಾಂಕ್ ಪಡೆದಿದ್ದಾರೆ. ಕೋಲಾರ ತಾಲೂಕಿನ ಇರಗಸಂದ್ರ ಗ್ರಾಮದ ರೈತ ಆನಂದ್ ಹಾಗೂ ಸುಶೀಲಮ್ಮ ದಂಪತಿ ಪುತ್ರ ಎ.ಮಧು ಅವರು ಯುಪಿಎಸ್ಸಿ ಪರೀಕ್ಷೆಯಲ್ಲಿ 544ನೇ ರ‍್ಯಾಂಕ್ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.