UPSC ಅಧ್ಯಕ್ಷ ಮನೋಜ್ ಸೋನಿ ರಾಜೀನಾಮೆ

0
10

ಕೇಂದ್ರ ಲೋಕಸೇವಾ ಆಯೋಗದ (UPSC) ಅಧ್ಯಕ್ಷ ಮನೋಜ್ ಸೋನಿ ಅವರು ವೈಯಕ್ತಿಕ ಕಾರಣಗಳಿಂದ ಇಂದು (ಶನಿವಾರ) ರಾಜೀನಾಮೆ ಸಲ್ಲಿಸಿದ್ದಾರೆ.
ಅವರು ತಮ್ಮ ಅಧಿಕಾರ ಅವಧಿಗೂ ಮನ್ನವೇ 5 ವರ್ಷಗಳ ಮೊದಲು ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. 2029 ರಲ್ಲಿ ಅವರ ಅವಧಿ ಮುಗಿಯುವ ಸುಮಾರು ಐದು ವರ್ಷಗಳ ಮೊದಲು ಸೋನಿ ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ರಾಜೀನಾಮೆ ನೀಡಿದ್ದಾರೆ. ಸೋನಿ ಅವರು 2017 ರಲ್ಲಿ ಆಯೋಗದ ಸದಸ್ಯರಾಗಿ ಸೇರ್ಪಡೆಗೊಂಡರು ಮತ್ತು ಮೇ 16, 2023 ರಂದು ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಇನ್ನು ಅವರ ರಾಜೀನಾಮೆ ಅಂಗೀಕಾರವಾಗುತ್ತದೋ ಇಲ್ಲವೋ ಮತ್ತು ಅವರು ರಿಲೀವ್ ಆಗುತ್ತಾರೋ ಇಲ್ಲವೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಮೂಲಗಳು ತಿಳಿಸಿವೆ.

Previous articleಕೋಡಿ ಬಿದ್ದ ಹಿರೇಕೊಳಲೆ ಕೆರೆ
Next articleಸಾಮಾಜಿಕ ಜಾಲತಾಣದಲ್ಲಿ ‘ಫೋನ್‌ಪೇ’ ವಿರುದ್ಧ ಬಾಯ್‌ಕಾಟ್ ಅಭಿಯಾನ