ವೀರಪ್ಪನ್‌ ಸಹಚರ ಜ್ಞಾನಪ್ರಕಾಶ್‌ ನಿಧನ

0
9

ಮೈಸೂರು: ಕಾಡುಗಳ್ಳ ವೀರಪ್ಪನ್ ಸಹಚರ ಪಾಲರ್ ಬಾಂಬ್ ಸ್ಫೋಟದ ಪ್ರಮುಖ ಅಪರಾಧಿ ಜ್ಞಾನ ಪ್ರಕಾಶ್ (69) ಸಾವನ್ನಪ್ಪಿದ್ದಾನೆ.
ಪಾಲಾರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ 1987ರ ಭಯೋತ್ಪಾದಕ ಮತ್ತು ವಿಚ್ಛಿದ್ರಕಾರಿ ಚಟುವಟಿಕೆಗಳ ತಡೆ ಕಾಯಿದೆಯಡಿ ಜ್ಞಾನ ಪ್ರಕಾಶ್ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ. ಜೈಲಿನಲ್ಲಿ ಆತನಿಗೆ ಅನಾರೋಗ್ಯ ಕಾಡಿದ್ದರಿಂದ ಜಾಮೀನು ನೀಡಲಾಗಿತ್ತು. ಸಂದನಪಾಳ್ಯದಲ್ಲಿ ಕ್ರಿಶ್ಚಿಯನ್‌ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ಹನೂರು ತಾಲ್ಲೂಕಿನ ಅರಣ್ಯದಂಚಿನ ಸಂದನಪಾಳ್ಯದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

Previous articleಐತಿಹಾಸಿಕ ದಾಖಲೆ ಬರೆದ ಭಾರತ ಮಹಿಳಾ ತಂಡಕ್ಕೆ ಭರ್ಜರಿ ಜಯ
Next articleಇಂದು ಹುಬ್ಬಳ್ಳಿಯಲ್ಲಿ ‘ಕಾಟೇರ’ ದರ್ಶನ