ಅಂಕಿತಾಗೆ 5 ಲಕ್ಷ ಬಹುಮಾನ ನೀಡಿ ಸನ್ಮಾನಿಸಿದ ಡಿ. ಕೆ. ಶಿವಕುಮಾರ

0
19

ಅಂಕಿತಾ ಹಾಗೂ ನವನೀತ್‌ಗೆ ಸನ್ಮಾನಿಸಿ ಗೌರವಿಸಿ ಅಂಕಿತಾಗೆ 5 ಲಕ್ಷ ರೂ. ಹಾಗೂ ನವನೀತ್‌ಗೆ 2 ಲಕ್ಷ ರೂ. ಚೆಕ್‌ ವಿತರಣೆ

ಬೆಂಗಳೂರು: ಸರ್ಕಾರಿ ಶಾಲೆಯ ಮಕ್ಕಳು ಯಾರಿಗೇನೂ ಕಡಿಮೆಯಿಲ್ಲ ಎಂಬುದನ್ನು ಈ ಇಬ್ಬರೂ ಮಕ್ಕಳು ನಿರೂಪಿಸಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು SSLC ಪರೀಕ್ಷೆಯಲ್ಲಿ ರಾಜ್ಯಕ್ಕೇ ಪ್ರಥಮ ಸ್ಥಾನ ಪಡೆದ ಬಾಗಲಕೋಟೆಯ ಮುಧೋಳ ಮೂಲದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಹಾಗೂ ಮೂರನೇ ಸ್ಥಾನ ಪಡೆದ ಮಂಡ್ಯದ ಕನ್ನಲಿ ಗ್ರಾಮದ ನವನೀತ್‌ ಅವರನ್ನು ಇಂದು ಭೇಟಿಯಾಗಿ ಸನ್ಮಾನಿಸಿ ಗೌರವಿಸಿದೆ. ಹಾಗೆಯೇ ಅವರ ಮುಂದಿನ ವಿದ್ಯಾಭ್ಯಾಸಕ್ಕಾಗಿ ಅಂಕಿತಾಗೆ 5 ಲಕ್ಷ ರೂ. ಹಾಗೂ ನವನೀತ್‌ಗೆ 2 ಲಕ್ಷ ರೂ. ಚೆಕ್‌ ವಿತರಿಸಿದೆ. ಸರ್ಕಾರಿ ಶಾಲೆಯ ಮಕ್ಕಳು ಯಾರಿಗೇನೂ ಕಡಿಮೆಯಿಲ್ಲ ಎಂಬುದನ್ನು ಈ ಇಬ್ಬರೂ ಮಕ್ಕಳು ನಿರೂಪಿಸಿದ್ದಾರೆ. ಮುಂದೆ ಕೂಡ ಇದೇ ರೀತಿ ಓದಿ ನಿಮ್ಮ ಶಾಲೆ, ಶಿಕ್ಷಕರು, ಪೋಷಕರಿಗೆ ಕೀರ್ತಿ ತನ್ನಿ ಎಂದು ಶುಭ ಹಾರೈಸಿದೆ ಎಂದಿದ್ದಾರೆ.

Previous articleಜೈಲಿಂದ ಬಿಡುಗಡೆಯಾದ ರೇವಣ್ಣ
Next articleಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರು ರಾಜಕೀಯವಾಗಿ ಪ್ರಬುದ್ಧರು