ಅಟ್ರಾಸಿಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತ್ಯೇಕವಾಗಿ ಡಿ ಸಿ ಆರ್ ಇ ಪೊಲೀಸ್ ಠಾಣೆ ಪ್ರಾರಂಭ : ಜಿಲ್ಲಾ ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ

ಮಳವಳ್ಳಿ: ಅಟ್ರಾಸಿಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತ್ಯೇಕವಾಗಿ
ಡಿಸಿ ಆರ್ ಇ ಪೊಲೀಸ್ ಠಾಣೆ ಪ್ರಾರಂಭವಾಗಿದೆ ಅಲ್ಲೂ ದೂರು ದಾಖಲು ಮಾಡಿಕೊಳ್ಳಬಹುದು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದರು.
ಮಳವಳ್ಳಿಪಟ್ಟಣದ ಅಂಬೇಡ್ಕರ್ ಭವನದಲ್ಲಿ ಮಂಡ್ಯ ಜಿಲ್ಲಾ ಪೊಲೀಸ್ ಇಲಾಖೆ‌ ಹಾಗೂ ಮಳವಳ್ಳಿ ಉಪ ವಿಭಾಗ ವತಿಯಿಂದ ತಾಲ್ಲೂಕು ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕುಂದುಕೊರತೆ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ಅಟ್ರಾಸಿಟಿ ಪ್ರಕರಣವನ್ನು ಸ್ಥಳೀಯ ಠಾಣೆಯಲ್ಲೂ ದೂರು ಸಲ್ಲಿಸಬಹುದು. ಒಂದು ವೇಳೆ ಪೊಲೀಸ್ ಠಾಣೆಯಲ್ಲಿ ದೂರು ಪಡೆಯಲು ನಿರಾಕರಿಸದರೆ ಅಂತಹ ಪೊಲೀಸರ ಮೇಲೆಯೂ ಕ್ರಮ ಕೈಗೊಳ್ಳುತ್ತೇವೆ ಎಂದರು.

ಕಾರ್ಯಕ್ರಮದಲ್ಲಿ ಡಿವೈಎಸ್ ಪಿ ಕೃಷ್ಣಪ್ಪ, ಟೌನ್ ಇನ್ಸ್ ಪೆಕ್ಟರ್ ರವಿಕುಮಾರ, ಹಲಗೂರು ಸರ್ಕಲ್ ಇನ್ಸ್ ಪೆಕ್ಟರ್ ಶ್ರೀಧರ್, ಗ್ರಾಮಾಂತರ ಇನ್ಸ್ ಪೆಕ್ಟರ್ ಮಹೇಶ್, ಪಿಎಸ್ ಐ ಪ್ರಕಾಶ,ಲೋಕೇಶ್, ಸಿದ್ದರಾಜು, ಶರಣ ರೆಡ್ಡಿ ಸೇರಿದಂತೆ ಹಲವರು ಇದ್ದರು.