ಅಣ್ಣಪ್ಪ ಸ್ವಾಮಿಯ ಗುಡಿಯಲ್ಲಿ ಯುವಕನ ಹುಚ್ಚಾಟ

0
22

ಮಂಗಳೂರು: ಪುಣ್ಯ ಕ್ಷೇತ್ರ ಕದ್ರಿ ಮಂಜುನಾಥನ ಸನ್ನಿಧಿಯಲ್ಲಿ ಯುವಕನೊಬ್ಬನ ಹುಚ್ಚಾಟ ನಡೆಸಿದ್ದಾನೆ.
ಇಂದು ಮುಂಜಾನೆ ಬೈಕ್ ಚಲಾಯಿಸಿಕೊಂಡು ನೇರ ಕದ್ರಿ ದೇವಸ್ಥಾನದ ಪ್ರಾಂಗಣ ಪ್ರವೇಶಿಸಿದ ಯುವಕ ನೇರವಾಗಿ ದೇವಸ್ಥಾನದ ಒಳಗೆ ಪ್ರವೇಶ ಮಾಡಿದ್ದಾನೆ. ಬಳಿಕ ಅಣ್ಣಪ್ಪ ಸ್ವಾಮಿಯ ಗುಡಿಯ ಮುಂದೆ ಹೋಗಿ ಕಾಲಿನಿಂದ ಬಾಗಿಲು ಒದ್ದು ಅಪಚಾರ ಮಾಡಿದ್ದಾನೆ. ಅಷ್ಟೇ ಅಲ್ಲದೆ ಅರ್ಚಕರ ಮೇಲೂ ಹಲ್ಲೆ ನಡೆಸಿ ದೈವದ ಕತ್ತಿಯನ್ನು ಕೈಗೆತ್ತಿಕೊಂಡು ಹುಚ್ಚಾಟ ನಡೆಸಿದ್ದಲ್ಲದೆ, ಪ್ರಶ್ನೆ ಮಾಡಿದ ಅರ್ಚಕರ ಮೇಲೂ ಹಲ್ಲೆಗೆ ಯತ್ನಿಸಿದ್ದಾನೆ. ದೈವಸ್ಥಾನದ ಬಳಿ ಇದ್ದ ಕತ್ತಿಯನ್ನು ಕೈಗೆತ್ತಿಕೊಂಡು ಕೆಲಕಾಲ ಆತಂಕದ ವಾತಾವರಣವನ್ನು ಸೃಷ್ಟಿಸಿದ್ದ. ಈ ಹುಚ್ಚಾಟದಿಂದ ಅಲ್ಲಿ ಸೇರಿದ್ದ ಅರ್ಚಕರು ಹಾಗೂ ಭಕ್ತರು ಗಾಭರಿಗೊಂಡಿದ್ದಾರೆ. ಯಾರ ನಿಯಂತ್ರಣಕ್ಕೂ ಸಿಗದೆ ಸಿಕ್ಕಾಪಟ್ಟೆ ದಾಂದಲೆ ನಡೆಸಿದ ಯುವಕನನ್ನು ಕೊನೆಗೂ ಎಲ್ಲರೂ ಸೇರಿ ಹಗ್ಗದಿಂದ ಕಟ್ಟಿಹಾಕಿದ್ದಾರೆ. ಬಳಿಕ ಯುವಕನನ್ನು ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ. ಸದ್ಯ ಘಟನೆ ಬಗ್ಗೆ ಕದ್ರಿ ಠಾಣೆಗೆ ದೇವಸ್ಥಾನದ ಮುಖ್ಯಾಧಿಕಾರಿ ದೂರು ನೀಡಿದ್ದಾರೆ. ಯುವಕನ ವಶಕ್ಕೆ ಪಡೆದು ಪೊಲೀಸರು ವಿಚಾರಣೆಯನ್ನು ನಡೆಸುತ್ತಿದ್ದಾರೆ.

Previous articleಕೆ-ಸೆಟ್‌-23: ಅರ್ಹ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ದಿನಾಂಕ ಪ್ರಕಟ
Next articleಡೆಂಗ್ಯೂ: ಮೆಡಿಕಲ್ ಎಮರ್ಜೆನ್ಸಿ ಘೋಷಿಸುವಂತೆ ಶೆಟ್ಟರ್ ಆಗ್ರಹ