ಅತ್ತು ಕರೆದು ಮಾಡಿರುವ ರೀತಿಯಲ್ಲಿ ಬಿಜೆಪಿ ಅಧ್ಯಕ್ಷರ ಆಯ್ಕೆ

0
27
ಶೆಟ್ಟರ್

ಹುಬ್ಬಳ್ಳಿ: ಬಿಜೆಪಿಯ ಕೇಂದ್ರ ನಾಯಕರು ಅತ್ತು ಕರೆದು ಮಾಡಿರುವ ರೀತಿಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರನ್ನು ಆಯ್ಕೆ ಮಾಡಿದ್ದಾರೆ ಎಂದು ಮಾಜಿ ಸಿಎಂ ಹಾಗೂ ವಿಧಾನ ಪರಿಷತ್ ಸದಸ್ಯ ಜಗದೀಶ ಶೆಟ್ಟರ್ ಲೇವಡಿ ಮಾಡಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಆರು ತಿಂಗಳಿಂದ ಬಿಜೆಪಿ ನಾಯಕನ ಆಯ್ಕೆ ಮಾಡಿರಲಿಲ್ಲ. ಇದೀಗ ಆಯ್ಕೆ ಮಾಡಿದ್ದಾರೆ. ರಾಜಕೀಯ ಪಕ್ಷ ಆಗಿ ತಕ್ಷಣವೇ ರಾಜ್ಯಾಧ್ಯಕ್ಷರ ಆಯ್ಕೆ ಮಾಡಬೇಕಿತ್ತು. ಬಿಜೆಪಿ ಫೇಲ್ ಆಗಿದೆ ಎಂದು ಹರಿಹಾಯ್ದರು.
ಬಿಜೆಪಿಯವರು ಅಂತೂ ಆರು ತಿಂಗಳ ಮೇಲೆ ಅಧ್ಯಕ್ಷರನ್ನು ಮಾಡಿದ್ದಾರೆ. ನಾನು ಕಾಂಗ್ರೆಸ್‌ನಲ್ಲಿ ಇದ್ದಿನಿ ಅಧ್ಯಕ್ಷರ ಆಯ್ಕೆ ಅವರ ಪಕ್ಷಕ್ಕೆ ಬಿಟ್ಟ ವಿಚಾರ. ಕಾಂಗ್ರೆಸ್ ೧೩೬ ಸ್ಥಾನ ಪಡೆದು ಬಲಾಢ್ಯವಾಗಿ ಬೆಳೆದಿದೆ. ಉತ್ತಮವಾಗಿ ಕೆಲಸ ಮಾಡುತ್ತಿದೆ. ಹೀಗಿರುವಾಗ ಆಪರೇಷನ್ ಕಮಲದ ಭ್ರಮೆಯಲ್ಲಿ ಬಿಜೆಪಿಯವರಿದ್ದಾರೆ ಎಂದರು.

Previous articleಕನ್ನಡ ಬಾವುಟಕ್ಕಾಗಿ ಸಾಮಾಜಿಕ ಜಾಲತಾಣಗಳಲ್ಲಿ ಇಂದು ಅಭಿಯಾನ
Next articleಡಿಕೆಶಿ ಜೊತೆ ಹೊಂದಾಣಿಕೆ ಪ್ರಶ್ನೆಯೇ ಇಲ್ಲ