Home Advertisement
Home ಅಪರಾಧ ಅತ್ಯಾಚಾರದ ಆರೋಪ : ಬಿಜೆಪಿ ಯುವ ಮುಖಂಡ ಅರೆಸ್ಟ್

ಅತ್ಯಾಚಾರದ ಆರೋಪ : ಬಿಜೆಪಿ ಯುವ ಮುಖಂಡ ಅರೆಸ್ಟ್

0
146

ಬಳ್ಳಾರಿ : 7 ವರ್ಷದ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿದ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ಬಿಜೆಪಿ ಯುವ ಮುಖಂಡ ದೇವು ನಾಯಕ ಎನ್ನುವಾತನನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
ಈ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. 7 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದಾನೆ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ. ಬೀದಿಯಲ್ಲಿ ಆಟವಾಡುತ್ತಿದ್ದ ಅಪ್ರಾಪ್ತ ಬಾಲಕಿಯ ಕಣ್ಣಿಗೆ ಬಟ್ಟೆ ಕಟ್ಟಿ ನಂಗತರ ಆಕೆಯ ಬಾಯಿ ಮುಚ್ಚಿ ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಇನ್ನು ಈ ಕಿಡಿಗೇಡಿಯ ಕೃತ್ಯಕ್ಕೆ ಓರ್ವ ಮಹಿಳೆಯ ಕೂಡ ಸಾಥ್ ನಿಡಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನು ಘಟನೆಯ ಬೆನ್ನಲ್ಲಿಯೇ ಸಂತ್ರಸ್ತ ಬಾಲಕಿಯ ಕುಟುಂಬಸ್ಥರು ಸಿರಿಗೇರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ ದಾಖಲಾದ ಬೆನ್ನಲ್ಲಿಯೇ ಸಿರಿಗೇರಿ ಠಾಣೆ ಪೊಲೀಸರು ಬಿಜೆಪಿ ಮುಖಂಡನನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಜೊತೆಗೆ, ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ತನಿಖೆ ಮುಂದುವರೆಸಿದ್ದಾರೆ.

Previous articleಮೀನು ಕದ್ದ ಆರೋಪ: ಮಹಿಳೆಯನ್ನು ಕಟ್ಟಿಹಾಕಿ ಥಳಿತ
Next articleಹಂಪಿ ಪ್ರವಾಸಕ್ಕೆ ಬಂದು ಆತ್ಮಹತ್ಯೆಗೆ ಯತ್ನ: ಓರ್ವ ಸಾವು