ಅಧಿಕಾರಕ್ಕೆ ಬಂದರೆ ಬಿಜೆಪಿ ಅವಧಿ ಹಗರಣಗಳ ತನಿಖೆಗೆ ಆಯೋಗ: ಸಿದ್ದರಾಮಯ್ಯ ಘೋಷಣೆ

0
15
ಪ್ರಜಾಧ್ವನಿ

ಬಾಗಲಕೋಟೆ: ಮುಂದಿನ ಬಾರಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಹಗರಣಗಳು, ಮಂತ್ರಿಗಳ ವಿರುದ್ಧ ಕೇಳಿ ಬಂದಿರುವ ಆರೋಪಗಳ ತನಿಖೆಗಾಗಿ ಪ್ರತ್ಯೇಕ ಆಯೋಗ ರಚಿಸಲಾಗುವುದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಬಾಗಲಕೋಟೆಯಲ್ಲಿ ಜರುಗಿದ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳಗಿದ್ದು, ನಾವು ಅಧಿಕಾರಕ್ಕೆ ಬಂದಲ್ಲಿ ಸಮಗ್ರ ತನಿಖೆಗೆ ಮುಂದಾಗುವುದಾಗಿ ಘೋಷಿಸಿದರು.
ಕೃಷ್ಣಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದಲ್ಲಿ ನನೆಗುದಿಗೆ ಬಿದ್ದಿರುವ ಎಲ್ಲ ಯೋಜನೆಗಳನ್ನು ಪೂರ್ಣಗೊಳಿಸಲು ೨ ಲಕ್ಷ ಕೋಟಿ ರೂ. ಮೀಸಲಿಡಲಾಗುವುದು ಎಂದರು.

Previous articleಮಂತ್ರಿಗಿರಿಗಾಗಿ ಮಾರಿಕೊಂಡವರು ಗರತಿಯಂತೆ ಉಪದೇಶ ಮಾಡುತ್ತಿದ್ದಾರೆ
Next articleಮಾರಾಟ ಮಾಡಿದ ಕಾರನ್ನೆ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ