Home ಅಪರಾಧ ಅನ್ನಭಾಗ್ಯ ಅಕ್ಕಿ ಸಾಗಿಸುತ್ತಿದ್ದ ಲಾರಿ ಜಪ್ತಿ, ಬಂಧನ

ಅನ್ನಭಾಗ್ಯ ಅಕ್ಕಿ ಸಾಗಿಸುತ್ತಿದ್ದ ಲಾರಿ ಜಪ್ತಿ, ಬಂಧನ

0
119

ಕಲಬುರಗಿ: ಅನ್ನಭಾಗ್ಯ ಯೋಜನೆಯಡಿ ಸಾರ್ವಜನಿಕರಿಗೆ ನೀಡಲಾಗುವ ಅಕ್ಕಿಯನ್ನು ಅಕ್ರಮವಾಗಿ ಲಾರಿಯಲ್ಲಿ ಸಾಗಿಸುತ್ತಿದ್ದ ಚಾಲಕನನ್ನು ಬಂಧಿಸಿ, ಲಾರಿ ಸಮೇತ 104 ಕ್ವಿಂಟಲ್ ಅಕ್ಕಿ ವಶಪಡಿಸಿಕೊಳ್ಳುವಲ್ಲಿ ಚೌಕ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಸ್ಥಳೀಯರ ಮಾಹಿತಿ ಮೇರೆಗೆ ರಿಂಗ್ ರೋಡ್ ಬಳಿಯ ತಾಜ್ ನಗರದಲ್ಲಿ ಪೊಲೀಸರು ಲಾರಿ ತಡೆದು ವಿಚಾರಿಸಿದಾಗ ಚಾಲಕ ಬಿಜೆಪಿ ಮುಖಂಡ ಮಣಿಕಂಠ ರಾಠೋಡ ಅವರಿಗೆ ಸೇರಿದ ಅಕ್ಕಿ ಎಂದು ಬಾಯ್ಬಿಟ್ಟಿದ್ದಾನೆ. ಲಾರಿ ಚಾಲಕ ವಿರೇಶ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕಲಬುರಗಿಯಿಂದ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದಾಗ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಚೌಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.