ಅಪಘಾತ-ವೈದ್ಯ ವಿದ್ಯಾರ್ಥಿ ಸಾವು

0
15
Accident

ಉಳ್ಳಾಲ: ಬೈಕ್ ಅಪಘಾತದಲ್ಲಿ ಇಂಟರ್ನಿ ವೈದ್ಯ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದು, ಸಹ ಸವಾರ ಗಾಯಗೊಂಡಿರುವ ಘಟನೆ ಅಂಬ್ಲಮೊಗರು ಗ್ರಾಮದ ಮದಕಬಳಿ ಸೋಮವಾರ ತಡರಾತ್ರಿ ನಡೆದಿದೆ.
ಬೆಂಗಳೂರು ಯಶವಂತಪುರ ನಿವಾಸಿ ನಿಶಾಂತ್(22) ಮೃತಪಟ್ಟ ವೈದ್ಯ ವಿದ್ಯಾರ್ಥಿ. ಸಹ ಸವಾರ ಬೀದರ್ ನಿವಾಸಿ ಶಕೀಬ್ ಅಪಘಾತದಲ್ಲಿ ಗಾಯಗೊಂಡಿದ್ದು, ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಬ್ಬರೂ ನಾಟೆಕಲ್ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಪೂರೈಸಿ ಇಂಟರ್ನ್‌ಶಿಪ್ ಮಾಡುತ್ತಿದ್ದರು. ಕುತ್ತಾರ್ ನಲ್ಲಿರುವ ಫ್ಲ್ಯಾಟ್ ಒಂದರಲ್ಲಿ ವಾಸಿಸುತ್ತಿದ್ದ ಇಬ್ಬರೂ ರಾತ್ರಿ ಬೈಕ್ ರೈಡ್ ತೆರಳಿದ್ದ ಸಂದರ್ಭ ರಸ್ತೆಯಲ್ಲಿದ್ದ ಹಂಪ್ ಗಮನಕ್ಕೆ ಬಾರದೇ, ಬೈಕ್ ಮೇಲಕ್ಕೆ ಹಾರಿ ಇಬ್ಬರೂ ಎಸೆಯಲ್ಪಟ್ಟು, ಸವಾರ ನಿಶಾಂತ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಹೆಚ್ಚು ವಾಹನ ಸಂಚಾರವಿಲ್ಲದ ರಸ್ತೆಯಾಗಿದ್ದರಿಂದ ರಾತ್ರಿ 12.15ರ ವೇಳೆಗೆ ಅಪಘಾತ ಸಂಭವಿಸಿದ್ದರೂ 12.30 ವೇಳೆ ಸ್ಥಳೀಯರ ಗಮನಕ್ಕೆ ಬಂದು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.
ಮೃತ ಏಕೈಕ ಪುತ್ರನಾಗಿದ್ದು, ಇನ್ನೆರಡು ತಿಂಗಳಲ್ಲಿ ನಡೆಯುವ ಘಟಿಕೋತ್ಸವದಲ್ಲಿ ವೈದ್ಯಕೀಯ ಪದವಿ ಪಡೆಯಬೇಕಿತ್ತು. ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಶಾಂತ್ ಹೈಕೋರ್ಟ್ ನ್ಯಾಯಾಧೀಶರಾದ ರಂಗಸ್ವಾಮಿ ನಟರಾಜ್ ಅವರ ಸೋದರಳಿಯ, ನ್ಯಾಯಾಧೀಶರು ಅಪಘಾತ ನಡೆದ ಸ್ಥಳ ಹಾಗೂ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

Previous articleತೆಂಗಿನ ಕಾಯಿ ಕೀಳಲು ಬಂದ ವ್ಯಕ್ತಿಯಿಂದ ಲೈಂಗಿಕ ದೌರ್ಜನ್ಯ
Next articleರಾಜ್ಯದಲ್ಲಿ ಬಿಜೆಪಿ 150 ಸ್ಥಾನದೊಂದಿಗೆ ಅಧಿಕಾರಕ್ಕೆ: ಕೆ. ಪ್ರತಾಪಸಿಂಹ ನಾಯಕ್ ವಿಶ್ವಾಸ