ಮಂಡ್ಯ: ಕಾರು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಅಪರಿಚಿತ ವ್ಯಕ್ತಿ ಮೃತಪಟ್ಟಿರುವ ಘಟನೆ ಹಳೇ ಬೂದನೂರು ಗ್ರಾಮದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಜರುಗಿದೆ.
ಮಂಗಳವಾರ ಮಧ್ಯಾಹ್ನ 12.30ಕ್ಕೆ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾರು ಡಿಕ್ಕಿಯಾಗಿ ವ್ಯಕ್ತಿಗೆ ತಲೆ ಪೆಟ್ಟು ಬಿದ್ದು ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಮಂಡ್ಯ ಗ್ರಾಮಾಂತರ ಠಾಣಾ ಪೊಲೀಸರು ಆಗಮಿಸಿ ಮಹಜರು ನಡೆಸಿ, ದೂರು ದಾಖಲಿಸಿಕೊಂಡು ಶವವನ್ನು ಮಂಡ್ಯ ಮಿಮ್ಸ್ ಆಸ್ಪತ್ರೆ ಶವಾಗಾರಕ್ಕೆ ಸಾಗಿಸಿದ್ದಾರೆ.
ಹೆದ್ದಾರಿ ಪ್ರಾಧಿಕಾರ ಬೂದನೂರು ಬಳಿ ಕಾಮಗಾರಿ ಸ್ಥಗಿತಗೊಳಿಸಿರುವ ಹಿನ್ನಲೆಯಲ್ಲಿ ನಿತ್ಯ ಅಪಘಾತ, ಸಾವು ನೋವುಗಳು ಸಂಭವಿಸುತ್ತಿವೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.