ಅಪಘಾತದಲ್ಲಿ ಮೃತಪಟ್ಟ ಯೋಧನ ಅಂತ್ಯಕ್ರಿಯೆ: ದುಃಖದ ಮಡುವಿನಲ್ಲಿ ನವಲಿಹಾಳ

0
27

ಬೆಳಗಾವಿ: ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಚಿಕ್ಕೋಡಿ ತಾಲ್ಲೂಕಿನ ನವಲಿಹಾಳ ಗ್ರಾಮದ ನಿವಾಸಿ ಯೋಗೇಶ ಅಪ್ಪಾಸಾಹೇಬ ದತ್ತವಾಡೆ (24) ಬುಧವಾರ ತಡರಾತ್ರಿ ಅಪಘಾತವೊಂದರಲ್ಲಿ ಮೃತಪಟ್ಟಿದ್ದು, ಮೃತ ಯೋಧನ ಅಂತ್ಯಕ್ರಿಯೆ ಸ್ವಗ್ರಾಮ ನವಲಿಹಾಳ ಗ್ರಾಮದಲ್ಲಿ ಗುರುವಾರ ಸಂಜೆ ನೆರವೇರಿದೆ.
ಮದ್ರಾಸ್ ರೆಜಮೆಂಟ್ ನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಯೋಗೇಶ ರಜೆ ಮೇಲೆ ಸ್ವಗ್ರಾಮಕ್ಕೆ ಆಗಮಿಸಿದ್ದರು. ಬುಧವಾರ ತಡರಾತ್ರಿ ತನ್ನ ಸ್ನೇಹಿತರ ಮನೆಗೆ ತೆರಳಿ ಸ್ವಗ್ರಾಮ ನವಲಿಹಾಳಕ್ಕೆ ಬೈಕ್ ನಲ್ಲಿ ಮರಳುವಾಗ ನಿಪ್ಪಾಣಿ ನಗರದ ಹೊರ ವಲಯದ ಸ್ತವನಿಧಿ ಘಾಟ್ ನಲ್ಲಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಯೋಧ ಯೋಗೇಶ ದತ್ತವಾಡೆ (24) ಸ್ಥಳದಲ್ಲಿಯೇ ಮೃತಪಟ್ಟಿದ್ದ, ಹಿಂಬದಿ ಸವಾರ ಯುವರಾಜ ಕಮತೆ (24) ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ನಿಪ್ಪಾಣಿ ಶಹರ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ: ನಿನ್ನೆ ಸಂಜೆ ಸಕಲ ಸರ್ಕಾರಿ ಗೌರವಗಳೊಂದಿಗೆ ಮೃತ ಯೋಧನ ಅಂತ್ಯಕ್ರಿಯೆ ನೆರವೇರಿತು. ಮೃತ ಯೋಧನ ಪಾರ್ಥಿವ ಶರೀರವನ್ನು ಗ್ರಾಮದಲ್ಲಿ ಮೆರವಣಿಗೆ ಮಾಡಿ, ನಂತರ ಅಂತ್ಯಕ್ರಿಯೆ ಮಾಡಲಾಯಿತು. ಯೋಧನ ನಿಧನದಿಂದ ಗ್ರಾಮದಲ್ಲಿ ಶೋಕ ಮಡುಗಟ್ಟಿದೆ.

Previous articleದೇವನ ಆಜ್ಞೆ ಮೀರದಿರೆ ಪುಣ್ಯಪ್ರಾಪ್ತಿ
Next articleSSLC ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟ