ಅಪಹರಣ ಪ್ರಕರಣ:  ರೇವಣ್ಣಗೆ ಜಾಮೀನು ಮಂಜೂರು

0
26

ಬೆಂಗಳೂರು:  ಜೆಡಿಎಸ್ ಹಿರಿಯ ನಾಯಕ, ಶಾಸಕ ಎಚ್.ಡಿ.ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತು ಬದ್ದ ಜಾಮೀನು ನೀಡಿದೆ.

ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಲ್ಲಿ ಪ್ರಕರಣದ ಕುರಿತು ವಾದ ವಿವಾದವನ್ನು ನ್ಯಾಯಾಧೀಶರು ಆಲಿಸಿದರು. ನಂತರ ರೇವಣ್ಣಗೆ 5 ಲಕ್ಷ ರೂಪಾಯಿ ಬಾಂಡ್ ನೀಡುವಂತೆ ಕೋರ್ಟ್ ಸೂಚಿಸಿ ಜಾಮೀನು ಮಂಜೂರು ಮಾಡಿದೆ.ಸಾಕ್ಷ್ಯಾಧಾರಗಳನ್ನು ನಾಶಪಡಿಸಬಾರದು, ಎಸ್ ಐಟಿ ಅಧಿಕಾರಿಗಳ ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು ಎಂಬ ಷರತ್ತು ವಿಧಿಸಿ ಕೋರ್ಟ್ ತೀರ್ಪು ನೀಡಿದೆ.ನಾಳೆ ಬೆಳಗ್ಗೆ ರೇವಣ್ಣ ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಆಗಲಿದ್ದಾರೆ.

Previous articleಲೋಕಸಭೆ ಚುನಾವಣೆ ಬಳಿಕ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮೈತ್ರಿ ಸರ್ಕಾರ
Next articleಗುಡುಗು, ಸಿಡಿಲಿನ ಆರ್ಭಟ ಕುರಿಗಾಹಿ ಮರಣ : 17 ಕುರಿಗಳ ಸಾವು