ವಾಷಿಂಗ್ಟನ್: ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಸ್ಥಾನಕ್ಕೆ ಕಮಲಾ ಹ್ಯಾರಿಸ್ ತಮ್ಮ ಉಮೇದುವಾರಿಕೆಯನ್ನು ಘೋಷಿಸುವ ಕಡತಗಳಿಗೆ ಸಹಿ ಹಾಕಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು ಇಂದು, ನಾನು ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಸ್ಥಾನಕ್ಕೆ ನನ್ನ ಉಮೇದುವಾರಿಕೆಯನ್ನು ಅಧಿಕೃತವಾಗಿ ಘೋಷಿಸುವ ಫಾರ್ಮ್‌ಗಳಿಗೆ ಸಹಿ ಮಾಡಿದ್ದೇನೆ. ಪ್ರತಿ ಮತವನ್ನು ಗಳಿಸಲು ನಾನು ಶ್ರಮಿಸುತ್ತೇನೆ ಎಂದಿದ್ದಾರೆ.
ನವೆಂಬರ್ 5 ರಂದು ನಡೆಯಲಿರುವ ಯುಎಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಜೋ ಬೈಡನ್ ಹಿಂದೆ ಸರಿದ ನಂತರ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಡೆಮಾಕ್ರಟಿಕ್ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ.