ಅಯೋಧ್ಯೆಯಲ್ಲಿ ದೀಪಾವಳಿ ಆಚರಿಸಿದ ಸಿಎಂ

ಲಖನೌ: ಅಯೋಧ್ಯೆ ರಾಮ ಮಂದಿರಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಈ ಕುರಿತು ಮಾಹಿತಿ ನೀಡಿರುವ ಮುಖ್ಯಮಂತ್ರಿಗಳ ಕಚೇರಿ, ಈ ಬಾರಿಯ ದೀಪಾವಳಿ ಐತಿಹಾಸಿಕ ಮತ್ತು ಅಭೂತಪೂರ್ವವಾಗಿದೆ. 500 ವರ್ಷಗಳ ಸುದೀರ್ಘ ಕಾಯುವಿಕೆಯ ಬಳಿಕ ಬಾಲರಾಮ ತನ್ನ ನಿವಾಸದಲ್ಲಿ ಆಸೀನನಾಗಿದ್ದಾನೆ. ಅಯೋಧ್ಯೆ ಬಾಲರಾಮನ ಜನ್ಮಸ್ಥಳದಲ್ಲಿ ನಿರ್ಮಿಸಲಾದ ಹೊಸ ದೇವಾಲಯದಲ್ಲಿ ಅಸಂಖ್ಯಾತ ದೀಪಗಳನ್ನು ಬೆಳಗಿಸಲಾಗುವುದು ಎಂದು ತಿಳಿಸಿದೆ.
ರಾಜ್ಯ ಸರ್ಕಾರ ‘ದೀಪೋತ್ಸವ’ ಆಯೋಜಿಸುವ ಮೂಲಕ ಅಯೋಧ್ಯೆಯಲ್ಲಿ ದೀಪಾವಳಿಯನ್ನು ಆಚರಿಸುವ ಪ್ರಾಚೀನ ಮತ್ತು ವೈಭವದ ಸಂಪ್ರದಾಯವನ್ನು ಮರುಸ್ಥಾಪಿಸುತ್ತಿದೆ. ಇಡೀ ವಿಶ್ವ ಸಮುದಾಯಕ್ಕೆ ಅಯೋಧ್ಯೆಯ ವೈಭವವನ್ನು ಪರಿಚಯಿಸಲು ಕೆಲಸ ಮಾಡುತ್ತಿದೆ ಎಂದು ಹೇಳಿದೆ.