ಅರಣ್ಯಾಧಿಕಾರಿಗಳ ಕ್ರಮ ಪ್ರಶ್ನಿಸಿ ಕೋರ್ಟ್‌ ಮೊರೆ ಹೋದ ಜಗ್ಗೇಶ್

0
11

ಬೆಂಗಳೂರು: ಹುಲಿ ಉಗುರು ಪ್ರಕರಣದಲ್ಲಿ ಸಿಲುಕೊಂಡಿರುವ ನಟ ಜಗ್ಗೇಶ್​​​ ಅರಣ್ಯಾಧಿಕಾರಿಗಳ ಕ್ರಮವನ್ನು ಪ್ರಶ್ನೆ ಮಾಡಿ ಕೋರ್ಟ್​​ ಮೊರೆ ಹೋಗಿದ್ದಾರೆ ಎಂದು ತಿಳಿದುಬಂದಿದೆ.
ಅರಣ್ಯಾಧಿಕಾರಿಗಳು ನೀಡಿದ ನೋಟಿಸ್ ರದ್ದು ಪಡಿಸಬೇಕು. ನೋಟಿಸ್​​ಗೆ ಉತ್ತರಿಸುವ ಮೊದಲೇ 14 ಅಧಿಕಾರಿಗಳಿಂದ ದಾಳಿ ನಡೆದಿದೆ. ಮನೆಯಲ್ಲಿನ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ. ಸಂದರ್ಶನದಲ್ಲಿ ಹೇಳಿದ ಮಾತನ್ನಾಧರಿಸಿ ತೇಜೋವಧೆ ಮಾಡಲಾಗಿದೆ. ಅರಣ್ಯಾಧಿಕಾರಿಗಳ ಕ್ರಮ ಕಾನೂನುಬಾಹಿರವೆಂದು ಘೋಷಿಸಬೇಕು ಎಂದು ಜಗ್ಗೇಶ್ ಪರ ವಕೀಲರು ಅರ್ಜಿಯಲ್ಲಿ ತಿಳಿಸಿದ್ದಾರೆ.

Previous articleಹುಲಿ ಉಗುರು: ಅರ್ಚಕರ ಬಂಧನ
Next articleಅರ್ಹರಿಗೆ ಪ್ರಶಸ್ತಿ ನೀಡಿ: ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿ ಸಭೆಯಲ್ಲಿ ಸಿಎಂ ಸೂಚನೆ