‘ಅಶ್ಲೀಲ ಮೆಸೇಜ್’ ಮಾಡಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಯುವಕ ಅರೆಸ್ಟ್

0
41

ಮಂಗಳೂರು: ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ ಕಳಿಸಿ ಕಿರುಕುಳ ಕೊಡುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವಾಲಿಬಾಲ್ ಆಟಗಾರನ ಕಾಮಕಾಂಡ ಬಯಲಾಗಿದೆ.
ವಿದ್ಯಾರ್ಥಿನಿಗೆ ಮೆಸೇಜ್ ಮೂಲಕ ಲೈಂಗಿಕ ಕಿರುಕುಳ ನೀಡಿದ ಹಿನ್ನಲೆಯಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರು ಆತನ ಮೇಲೆ ಹಲ್ಲೆ ಮಾಡಿ ಸೈಯದ್ ಮೊಬೈಲ್ ಕಿತ್ತುಕೊಂಡು ನೋಡಿದಾಗ ನೂರಾರು ಹುಡುಗಿಯರ ಜೊತೆಗಿನ ಸರಸ ಸಲ್ಲಾಪದ ವಿಡಿಯೋಗಳು ಪತ್ತೆಯಾಗಿವೆ. ಖಾಸಗಿ ಕಾಲೇಜಿನ ವಿದ್ಯಾರ್ಥಿಯಾಗಿರುವ ವಾಲಿಬಾಲ್ ಆಟಗಾರ ಸೈಯದ್ ಸಿಕ್ಕಿಬಿದ್ದಿದ್ದಾನೆ. ಸದ್ಯ ಬೆಳ್ತಂಗಡಿ ಪೊಲೀಸರು ಪೋಕ್ಸೋ ಕಾಯ್ದೆಯಡಿ ಆತನನ್ನು ಬಂಧಿಸಿದ್ದಾರೆ. ಇತ್ತ ತನ್ನ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಸೈಯದ್ ಕೂಡ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ಹೀಗಾಗಿ ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧವೂ ಎಫ್‌ಐಆರ್ ದಾಖಲಾಗಿದೆ.

Previous articleಪ್ರಧಾನಿ ಮೋದಿ ಅವರೊಂದಿಗೆ ರಾಜನಾಥ್ ಸಿಂಗ್ ಸಭೆ
Next articleಕೇರಳ ಸಿಎಂ ಕಚೇರಿ ಮತ್ತು ನಿವಾಸಕ್ಕೆ ಬಾಂಬ್ ಬೆದರಿಕೆ