Home Advertisement
Home ನಮ್ಮ ಜಿಲ್ಲೆ ಕೋಲಾರ ಅಶ್ವಥ್ ನಾರಾಯಣ ಹೇಳಿಕೆ ಖಂಡಿಸಿ ಪ್ರತಿಭಟನೆ‌

ಅಶ್ವಥ್ ನಾರಾಯಣ ಹೇಳಿಕೆ ಖಂಡಿಸಿ ಪ್ರತಿಭಟನೆ‌

0
112
ಕೋಲಾರ

ಕೋಲಾರ: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಚಿವ ಅಶ್ವಥ್ ನಾರಾಯಣ ಹೇಳಿಕೆ ಖಂಡಿಸಿ ಕೋಲಾರ‌ ಜಿಲ್ಲಾ‌ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಿನಾರಾಯಣ ನೇತೃತ್ವದಲ್ಲಿ ಕಾಂಗ್ರೆಸ್ ಭವನದ ಎದುರು ಪ್ರತಿಭಟನೆ ನಡೆಸಲಾಯಿತು.
ಸಚಿವ ಅಶ್ವಥ್ ನಾರಾಯಣ ವಿರುದ್ಧ ಧಿಕ್ಕಾರ ಕೂಗಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಕೂಡಲೇ ಸಚಿವ ಸಂಪುಟದಿಂದ ಅವರನ್ನು ವಜಾಗೊಳಿಸಬೇಕೆಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್‌ನ ಪ್ರಸಾದ್ ಬಾಬು, ಎಸ್ಸಿ ಘಟಕ ಅಧ್ಯಕ್ಷ ಜಯದೇವ್, ಊರುಬಾಗಿಲು ಶ್ರೀನಿವಾಸ್ ಸೇರಿದಂತೆ ಹಲವು ಮುಖಂಡರು ಕಾರ್ಯಕರ್ತರು ಇದ್ದರು.

Previous articleಟೀಂ ಇಂಡಿಯಾ ಆಯ್ಕೆ ಸಮಿತಿ ಮುಖ್ಯಸ್ಥ ಹುದ್ದೆಗೆ ಚೇತನ್ ಶರ್ಮಾ ರಾಜೀನಾಮೆ
Next articleಸರ್ವಾಂಗೀಣ ಅಭಿವೃದ್ಧಿಗೆ ಪೂರಕ ಬಜೆಟ್: ಶೆಟ್ಟರ್