ಆರು ಜಿಲ್ಲೆಗೆ e ಬಸ್

0
15

ಬೆಂಗಳೂರು: ಬೆಂಗಳೂರು-ಮೈಸೂರು ಮಾರ್ಗದ ಯಶಸ್ಸಿನ ನಂತರ, ಐದು ಅಂತರ್-ಜಿಲ್ಲಾ ಮಾರ್ಗಗಳಲ್ಲಿ ಇ ಬಸ್ ಸೇವೆ ವಿಸ್ತರಿಸಲು ಮುಂದಾಗಿದೆ. ನಿನ್ನೆಯಷ್ಟೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್​ಆರ್​ಟಿಸಿ) ಅಂತರ್ ನಗರ ನೂತನ ಹವಾ ನಿಯಂತ್ರಿತ ಎಲೆಕ್ಟ್ರಿಕ್ ಚಾಲಿತ ಇ.ವಿ. ಪವರ್ ಪ್ಲಸ್ ಬಸ್ ಗಳಿಗೆ ಚಾಲನೆ ನೀಡಿದರು.
ಬೆಂಗಳೂರು-ಮೈಸೂರು, ಬೆಂಗಳೂರು-ಮಡಿಕೇರಿ, ಬೆಂಗಳೂರು-ವಿರಾಜಪೇಟೆ, ಬೆಂಗಳೂರು-ದಾವಣಗೆರೆ, ಬೆಂಗಳೂರು-ಶಿವಮೊಗ್ಗ, ಬೆಂಗಳೂರು-ಚಿಕ್ಕಮಗಳೂರು, ಜಿಲ್ಲೆಗಳಿಗೆ ಹೊಸ್‌ ಬಸ್​ಗಳು ಸಂಚರಿಸುತ್ತವೆ.
ಇದು 203 ಗಂಟೆಗಳಲ್ಲಿ ಫಾಸ್ಟ್ ಚಾರ್ಚಿಂಗ್ ಮೂಲಕ ಸಂಪೂರ್ಣವಾಗಿ ರೀಚಾರ್ಜ್ ಮಾಡಬಹುದು. ಚಾಲಕರು, ನಿರ್ವಾಹಕರು ಸೇರಿದಂತೆ 45 ಆಸನಗಳನ್ನು ಹೊಂದಿದೆ. ಬಸ್ ನಲ್ಲಿ ಸಿಸಿ ಕ್ಯಾಮೆರಾಗಳು, ಅಗ್ನಿಶಾಮಕ ಸಾಧನ, ಎಮರ್ಜೆನ್ಸಿ ಬಟನ್, ಪ್ರಥಮ ಚಿಕಿತ್ಸಾ ಕಿಟ್, ಗ್ಲಾಸ್ ಹ್ಯಾಮರ್ ಮತ್ತಿತರ ಸುರಕ್ಷಿತ ವೈಶಿಷ್ಟ್ಯಗಳನ್ನು ಅಳವಡಿಸಲಾಗಿದೆ. 25 ಇ ಬಸ್‌ಗಳು ಈಗಾಗಲೇ ಆಗಮಿಸಿದ್ದು, ಏಪ್ರಿಲ್ ವೇಳೆಗೆ ಸಂಪೂರ್ಣವಾಗಿ 50 ಇ-ಬಸ್‌ಗಳನ್ನು ಕಾರ್ಯಾಚರಣೆ ನಡೆಸುತ್ತವೆ ಎಂದು ಹೇಳಿದ್ದಾರೆ.

Previous articleಹುಬ್ಬಳ್ಳಿ ಈದ್ಗಾ ಮೈದಾನಕ್ಕೆ ರಾಣಿ ಚೆನ್ನಮ್ಮ ನಾಮಕರಣ ಪ್ರಶ್ನಿಸಿ ಸಲ್ಲಿಸಿದ್ದ ಪಿಐಎಲ್ ತಿರಸ್ಕರಿಸಿದ ಹೈಕೋರ್ಟ್
Next article14 ದಿನಗಳ ನ್ಯಾಯಾಂಗ ಬಂಧನಕ್ಕೆ ನಟ ಚೇತನ್