ಆಂದೋಲಾ ಶ್ರೀ ವಿರುದ್ಧ ಎಫ್‌ಐಆರ್ ದಾಖಲು

0
24

ಕಲಬುರಗಿ: ಕೋಮುದ್ವೇಷ ಪ್ರಚೋದನಾ ಭಾಷಣ ಮತ್ತು ಕಾಂಗ್ರೆಸ್ ನಾಯಕರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಆಂದೋಲಾದ ಸಿದ್ಧಲಿಂಗ ಸ್ವಾಮೀಜಿ ವಿರುದ್ಧ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಏ. 15 ರಂದು ಚಿಂಚೋಳಿ ತಾಲ್ಲೂಕಿನ ಐನೊಳ್ಳಿ ಗ್ರಾಮದಲ್ಲಿ ಶ್ರೀ ರಾಮೋತ್ಸವ ಸಮಿತಿ ಆಯೋಜಿಸಿದ್ದ ಶ್ರೀ ರಾಮನವಮಿ ಉತ್ಸವದ ಕಾರ್ಯಕ್ರಮದಲ್ಲಿ ಆಂದೋಲದ ಸಿದ್ಧಲಿಂಗ ಸ್ವಾಮೀಜಿ, ಹಿಂದೂ-ಮುಸ್ಲಿಂ ಮಧ್ಯೆ ಕೋಮುದ್ವೇಷ ಬಿತ್ತುವ ಭಾಷಣ ಮಾಡಿದ್ದಾರೆ. ಅಲ್ಲದೇ, ಸಿಎಂ ಸಿದ್ದರಾಮಯ್ಯ, ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪೂರ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದು, ಕಲಬುರಗಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧವೂ ಹೀಯಾಳಿಸಿ ಮಾತನ್ನಾಡಿದ್ದಾರೆ ಎಂದು ಆರೋಪಿಸಿ ಎಫ್‌ಐಆರ್ ದಾಖಲಾಗಿದೆ ಎಂದು ಉಲ್ಲೇಖಿಸಲಾಗಿದೆ.
ಚಿಂಚೋಳಿ ಬ್ಲಾಕ್ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಶರಣು ಪಾಟೀಲ್ ಅವರ ದೂರಿನ ಮೇರೆಗೆ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous articleಕಾರು ಜಪ್ತಿಗೆ ಆದೇಶ: ಕೀ ಕೊಡದ ಜಿಲ್ಲಾಧಿಕಾರಿ
Next articleನೇಹಾ ಹತ್ಯೆಯಾಗಿ ಇಂದಿಗೆ ಒಂದು ವರ್ಷ