ಆಪರೇಷನ್ ಸಿಂಧೂರ್’ ಆರಂಭ: ಉಗ್ರರ ತಾಣಗಳ ಮೇಲೆ ಕ್ಷಿಪಣಿ ದಾಳಿ

0
28

ನವದೆಹಲಿ:  ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದ ಗಡಿಭಾಗದಲ್ಲಿ ಭಾರತೀಯ ಸೇನೆ ‘ಆಪರೇಷನ್ ಸಿಂಧೂರ್’ ಹೆಸರಿನಲ್ಲಿ ಉಗ್ರರ ತಾಣಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ.
ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ನಾಗರಿಕರನ್ನು ಭಯೋತ್ಪಾದಕರು ಕೊಂದಿದ್ದರು. ಇದಕ್ಕೆ ಪ್ರತಿಕಾರವಾಗಿ ಈ ಕಾರ್ಯಾಚರಣೆ ನಡೆಯುತ್ತಿದ್ದು, ಭಾರತ ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿದ್ದ 9 ಭಯೋತ್ಪಾದಕ ನೆಲೆಗಳನ್ನು ನಾಶಪಡಿಸಿದೆ.
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ 5 ಭಯೋತ್ಪಾದಕ ಶಿಬಿರಗಳನ್ನು  ಹಾಗೂ ಪಾಕಿಸ್ತಾನದಲ್ಲಿದ್ದ 4 ಭಯೋತ್ಪಾದಕ ನೆಲೆಗಳನ್ನು ನಾಶಪಡಿಸುವಲ್ಲಿ ಭಾರತದ ಸೇನೆಯ ಜಂಟಿ ಕಾರ್ಯಾಚರಣೆ ಯಶಸ್ವಿಯಾಗಿದೆ.
ಪಾಕಿಸ್ತಾನದ 9 ಪ್ರದೇಶದಲ್ಲಿರುವ ಉಗ್ರರ ತಾಣಗಳ ಮೇಲೆ ಕ್ಷಿಪಣಿ ದಾಳಿ ನಡೆಸಲಾಗಿದೆ ಎಂದು ಭಾರತದ ರಕ್ಷಣಾ ಸಚಿವಾಲಯ ಈ ಕುರಿತು ವಿವರಣೆ ನೀಡಿದೆ.

Previous articleಪ್ರಚೋದನಕಾರಿ ಘೋಷಣೆ: ಎಸ್.ಡಿ.ಪಿ.ಐ ಕಾರ್ಯಕರ್ತರ ವಿರುದ್ಧ ಪ್ರಕರಣ
Next articleಪಹಲ್ಗಾವ್ ಉಗ್ರರ ದಾಳಿಗೆ ಆಪರೇಷನ್ ಸಿಂಧೂರ ಮೂಲಕ ಪ್ರಬಲ ಪ್ರತ್ಯುತ್ತರ