ಇಂದು ಮೊದಲ ರಾಷ್ಟ್ರೀಯ ಬಾಹ್ಯಾಕಾಶ ದಿನ

0
26

ಬಾಹ್ಯಕಾಶ ಕ್ಷೇತ್ರದಲ್ಲಿಇಡೀ ವಿಶ್ವವೇ ನಿಬ್ಬೆರಾಗುವಂತೆ ಮಾಡಿದ ಭಾರತದ ಸಾಧನೆ ಚಂದ್ರಯಾನ -3. ಹೌದು, ಇಂದು ಮೊದಲ ವರ್ಷದ ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನು ಆಚರಿಸಲಾಗುತ್ತಿದೆ. ಚಂದ್ರಯಾನ -3 ಲ್ಯಾಂಡರ್ ಚಂದ್ರನನ್ನು ಸ್ಪರ್ಶಿಸಿದ ದಿನವಾದ ಆಗಸ್ಟ್ 23 ಅನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನವಾಗಿ ಆಚರಿಸಲಾಗುತ್ತಿದೆ.

ಭಾರತವು ತನ್ನ ಮೊದಲ ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನು (ಎನ್‌ಎಸ್‌ಪಿಡಿ -2024) 2024ರ ಆಗಸ್ಟ್‌ 23ರಂದು ‘ಚಂದ್ರನನ್ನು ಸ್ಪರ್ಶಿಸುವಾಗ ಜೀವನವನ್ನು ಸ್ಪರ್ಶಿಸುವುದು: ಭಾರತದ ಬಾಹ್ಯಾಕಾಶ ಕಥೆ’ ಎಂಬ ಧ್ಯೇಯವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ದೇಶದ ಬಾಹ್ಯಾಕಾಶ ಸಾಧನೆಗಳನ್ನು ಪ್ರದರ್ಶಿಸಲು ಕೇಂದ್ರವು ಸರಿಸುಮಾರು ಒಂದು ತಿಂಗಳ ಕಾರ್ಯಕ್ರಮವನ್ನು ಆಯೋಜನೆ ಮಾಡಿದೆ. ಚಂದ್ರಯಾನ-3 ಬಾಹ್ಯಾಕಾಶ ನೌಕೆಯನ್ನು 2023 ಜುಲೈ 14ರಂದು ಆಂಧ್ರಪ್ರದೇಶದ ಶ್ರೀಹರಿಕೋಟದ ಸತೀಶ್ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಬಾಹುಬಲಿ ಲಾಂಚ್ ವೆಹಿಕಲ್ ಮಾರ್ಕ್-III (LVM-3) ನಲ್ಲಿ ಯಶಸ್ವಿಯಾಗಿ ಉಡಾಯಿಸಲಾಗಿತ್ತು. 41ನೇ ದಿನದ ನಂತರದಲ್ಲಿ ಅಂದರೆ ಆಗಸ್ಟ್​ 23ರ ಸಂಜೆ ಚಂದ್ರನನ್ನು ವಿಕ್ರಮ್‌ ಲ್ಯಾಂಡರ್‌ ಸ್ಪರ್ಶಿಸಿತು. ಸಂಜೆ 6 ಗಂಟೆ 4 ನಿಮಿಷಕ್ಕೆ ಸರಿಯಾಗಿ ಚಂದ್ರನ ದಕ್ಷಿಣ ಧ್ರುವದಲ್ಲಿ ವಿಕ್ರಮ್​ ಇಳಿಯುವ ಮೂಲಕ ಭಾರತವು ಬಾಹ್ಯಾಕಾಶ ಕ್ಷೇತ್ರದಲ್ಲಿ ಐತಿಹಾಸಿಕ ಸಾಧನೆಯನ್ನು ಮಾಡಿದೆ.

Previous articleನೇಹಾ ಮಾದರಿಯಲ್ಲಿ ಹತ್ಯೆ ಮಾಡುವುದಾಗಿ ಬಾಲಕಿಗೆ ಬೆದರಿಕೆ
Next articleನಗರಸಭೆಗೆ ಪ್ರಶಂಸಾ ಪ್ರಶಸ್ತಿ ಪ್ರಧಾನ