ಇತಿಹಾಸವೇ ಇಲ್ಲದವರು ಪರರ ಇತಿಹಾಸವನ್ನು ಅಳಿಸಲು ಹೊರಟಿದ್ದಾರೆ

0
26

ನವದೆಹಲಿ: ನೆಹರು ಸ್ಮಾರಕ ವಸ್ತುಸಂಗ್ರಹಾಲಯ ಮರುನಾಮಕರಣದ ಕೇಂದ್ರ ಸರ್ಕಾರದ ತೀರ್ಮಾನಕ್ಕೆ ಕಾಂಗ್ರೆಸ್ ಕಿಡಿಕಾರಿದೆ. ಈ ಕುರಿತು ಹಿರಿಯ ಕಾಂಗ್ರೆಸ್ ನಾಯಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ಟ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತಿಹಾಸವೇ ಇಲ್ಲದವರು ಪರರ ಇತಿಹಾಸವನ್ನು ಅಳಿಸಲು ಹೊರಟಿದ್ದಾರೆ ಎಂದಿದ್ದಾರೆ.
ಅವರು ತಮ್ಮ ಟ್ವೀಟ್‌ನಲ್ಲಿ ಇತಿಹಾಸವೇ ಇಲ್ಲದವರು ಪರರ ಇತಿಹಾಸವನ್ನು ಅಳಿಸಲು ಹೊರಟಿದ್ದಾರೆ. ನೆಹರೂ ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯದ ಹೆಸರನ್ನು ಬದಲಾಯಿಸುವುದು ದುರದೃಷ್ಟಕರ ಪ್ರಯತ್ನವು ಆಧುನಿಕ ಭಾರತದ ವಾಸ್ತುಶಿಲ್ಪಿ ಮತ್ತು ಪ್ರಜಾಪ್ರಭುತ್ವದ ನಿರ್ಭೀತ ಕಾವಲುಗಾರ ಪಂಡಿತ್ ಜವಾಹರಲಾಲ್ ನೆಹರು ಅವರ ವ್ಯಕ್ತಿತ್ವವನ್ನು ಕಡಿಮೆ ಮಾಡಲು ಸಾಧ್ಯವಿಲ್ಲ. ಇದು ಬಿಜೆಪಿ-ಆರ್‌ಎಸ್‌ಎಸ್‌ನ ಕೀಳು ಮನಸ್ಥಿತಿ ಮತ್ತು ಸರ್ವಾಧಿಕಾರಿ ಧೋರಣೆಯನ್ನು ಮಾತ್ರ ತೋರಿಸುತ್ತದೆ. ಮೋದಿ ಸರ್ಕಾರದ ಕುಬ್ಜ ಚಿಂತನೆಯು ಭಾರತಕ್ಕೆ ‘ಜವಾಹರ್ ಆಫ್ ಹಿಂದ್’ ನೀಡಿದ ಬೃಹತ್ ಕೊಡುಗೆಯನ್ನು ಕಡಿಮೆ ಮಾಡಲು ಸಾಧ್ಯವಿಲ್ಲ! ಎಂದಿದ್ದಾರೆ.

Previous articleಮಂಡ್ಯದ ಮೈಶುಗರ್‌ಗೆ ಚಾಲನೆ
Next articleಲೋಕಾಯುಕ್ತ ಬಲೆಗೆ ಹರಿಹರ ನಗರಸಭೆ ಸದಸ್ಯೆ