Home ತಾಜಾ ಸುದ್ದಿ ಇವಿಎಂ–ವಿವಿ–ಪ್ಯಾಟ್‌ ಮತಗಳ ಹೋಲಿಕೆ: ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್‌

ಇವಿಎಂ–ವಿವಿ–ಪ್ಯಾಟ್‌ ಮತಗಳ ಹೋಲಿಕೆ: ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್‌

0
113

ನವದೆಹಲಿ: ಇವಿಎಂ ಮತಗಳನ್ನು ಸಂಪೂರ್ಣವಾಗಿ ವಿವಿಪ್ಯಾಟ್ ಚೀಟಿಗಳೊಂದಿಗೆ ತಾಳೆ ಮಾಡಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ವಿವಿಪ್ಯಾಟ್‌ನಲ್ಲಿ ಮುದ್ರಣವಾದ ಎಲ್ಲಾ ಸ್ಲಿಪ್‌ಗಳನ್ನು ಎಣಿಕೆ ಮಾಡಬೇಕೆಂದು ಕೆಲವರು ಅರ್ಜಿ ಸಲ್ಲಿಸಿದ್ದರು. ಅಷ್ಟೇ ಅಲ್ಲದೇ ವಿವಿಪ್ಯಾಟ್‌ನಲ್ಲಿ ಮುದ್ರಣವಾದ ಸ್ಲಿಪ್‌ಗಳನ್ನು ಮತದಾರರ ಕೈಗೆ ನೀಡಿ ಆತ ಅದನ್ನು ಬಾಕ್ಸ್‌ ಹಾಕಬೇಕೆಂದು ಕೋರಿ ಹಲವು ಮಂದಿ ಅರ್ಜಿ ಸಲ್ಲಿಸಿದ್ದರು.
ಏಪ್ರಿಲ್ 18ರಂದು ಸುಪ್ರೀಂ ನ್ಯಾಯಪೀಠ ಈ ಅರ್ಜಿಗಳ ವಿಚಾರಣೆ ಮುಕ್ತಾಯಗೊಳಿಸಿ ತೀರ್ಪು ಕಾಯ್ದಿರಿಸಿತ್ತು. ಚುನಾವಣಾ ಆಯೋಗದಿಂದ ಕೆಲ ಅಂಶಗಳ ಬಗ್ಗೆ ಸ್ಪಷ್ಟೀಕರಣ ಪಡೆಯಲು ವಿಚಾರಣೆ ನಡೆಸಿತ್ತು.
ಇದೀಗ ನ್ಯಾಯಪೀಠ ತನ್ನ ತೀರ್ಪು ನೀಡಿದ್ದು, ಇವಿಎಂ ಮತ್ತು ವಿವಿಪ್ಯಾಟ್ ಪೂರ್ಣ ತಾಳೆಯಾಗಬೇಕೆನ್ನುವ ಮನವಿಯನ್ನು ತಿರಸ್ಕರಿಸಲು ನಿರ್ಧರಿಸಿದೆ. ವಿದ್ಯುನ್ಮಾನ ಮತಯಂತ್ರಗಳಿಗೆ ಚಿಹ್ನೆಗಳನ್ನು ನೀಡಿದ ನಂತರ 45 ದಿನಗಳ ಕಾಲ ಚಿಹ್ನೆ ಲೋಡಿಂಗ್ ಘಟಕಗಳನ್ನು ಸೀಲ್ ಮಾಡಲು ಸುಪ್ರೀಂಕೋರ್ಟ್ ಚುನಾವಣಾ ಆಯೋಗಕ್ಕೆ ಆದೇಶ ನೀಡಿದೆ.