ಉಗ್ರ ಮಸೂದ್ ಅಜರ್ ಕುಟುಂಬಸ್ಥರು ಫಿನಿಶ್

0
31

ನವದೆಹಲಿ: ಆಪರೇಷನ್ ಸಿಂಧೂರ್ ದಾಳಿಯಲ್ಲಿ ಉಗ್ರ ಮಸೂದ್ ಅಜರ್ ಕುಟುಂಬಸ್ಥರು ಸಾವನ್ನಪ್ಪಿದ್ದಾರೆ.

ಈ ಕುರಿತಂತೆ ಅಜರ್‌ ಹೇಳಿಕೆ ಬಿಡುಗಡೆ ಮಾಡಿದ್ದು, ಭಾರತ ನಡೆಸಿದ ದಾಳಿಯಲ್ಲಿ 10 ಜನ ಕುಟುಂಬ ಸದಸ್ಯರು ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ. ಲಾಹೋರ್‌ನಿಂದ 400 ಕಿಲೋ ಮೀಟರ್ ದೂರದಲ್ಲಿರುವ ಬಹಾವಲ್ಪುರದಲ್ಲಿರುವ ಜೈಶ್ ಎ ಮೊಹಮ್ಮದ್ ನ ಪ್ರಧಾನ ಕಚೇರಿಯನ್ನು ಗುರಿಯಾಗಿರಿಸಿಕೊಂಡು ನಡೆಸಿರುವ ದಾಳಿಯಲ್ಲಿ ಲಷ್ಕರ್ ಮತ್ತು ಜೈಶ್ ಎ ಮೊಹಮ್ಮದ್ ಭಯೋತ್ಪಾದಕ ಸಂಘಟನೆಯ ಹಲವು ಕಮಾಂಡ್‌ಗಳು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಸುಮಾರು 18ಕ್ಕೂ ಅಧಿಕ ಎಕರೆ ಜಾಗದಲ್ಲಿರುವ ಜೈಶ್ ಇ ಮೊಹಮ್ಮದ್ ಪ್ರಧಾನ ಕಚೇರಿ ಉಗ್ರರ ನೇಮಕಾತಿ, ದೇಣಿಗೆ ಸಂಗ್ರಹ, ಉಗ್ರ ಚಟುವಟಿಕೆಯ ಕೇಂದ್ರ ಸ್ಥಾನವಾಗಿದ್ದು ಇದನ್ನು ಗುರಿಯಾಗಿರಿಸಿಕೊಂಡು ಭಾರತ ದಾಳಿ ನಡೆಸಿತ್ತು.

Previous article“ಆಪರೇಷನ್ ಸಿಂಧೂರ” ಹೆಸರು ಏಕೆ?
Next articleರಾತ್ರಿ ಇಡೀ ಸೇನಾ ಮುಖ್ಯಸ್ಥರೊಂದಿಗೆ ಮೋದಿ