SK Home Ad
Home ನಮ್ಮ ಜಿಲ್ಲೆ ಉಡುಪಿ ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ ರೋಹಿಣಿ ಸಿಂಧೂರಿ

ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ ರೋಹಿಣಿ ಸಿಂಧೂರಿ

0
240

ಉಡುಪಿ: ಕಾರ್ಮಿಕ ಇಲಾಖೆಯ ಸರಕಾರದ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಅವರನ್ನು ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದ ವರೆಗೆ ನೇಮಕ ಮಾಡಿ ರಾಜ್ಯ ಸರಕಾರ ಆದೇಶಿಸಿದೆ.

ರಾಜ್ಯದ ಅಭಿವೃದ್ಧಿ ಯೋಜನಾ ಕಾರ್ಯಕ್ರಮಗಳ ಜಾರಿ ಮತ್ತು ಪರಿಶೀಲನೆ ಹಾಗೂ ಅಹವಾಲುಗಳ ವಿಚಾರಣೆ, ಅನಿರೀಕ್ಷಿತ ತಪಾಸಣೆ ಕುರಿತು ಪರಿಶೀಲನೆ ಮಾಡಿ ಸರಕಾರಕ್ಕೆ ವರದಿ ಮಾಡಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು/ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯ ದರ್ಶಿಗಳ ಮಟ್ಟದ ಅಧಿಕಾರಿಗಳನ್ನು ವಿವಿಧ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಲಾಗಿದೆ.