ಉಡುಪಿ ವಿಡಿಯೋ ಪ್ರಕರಣ: ಪ್ರತಿಭಟನಕಾರರ ವಿರುದ್ಧ FIR

0
9

ಉಡುಪಿ: ಉಡುಪಿ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಮಹಿಳಾ ಮೋರ್ಚಾ ಉಡುಪಿ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕಳೆದ ವಾರ ಉಡುಪಿಯಲ್ಲಿ ನಡೆದ ಬಿಜೆಪಿ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜುಲೈ 28ರಂದು ಉಡುಪಿ ಜಿಲ್ಲಾ ಬಿಜೆಪಿ ಹಮ್ಮಿಕೊಂಡಿದ್ದ ಕಡಿಯಾಳಿಯಲ್ಲಿರುವ ಬಿಜೆಪಿ ಕಚೇರಿಯಿಂದ ಎಸ್‌ಪಿ ಕಚೇರಿ ವರೆಗೆ ನಡೆದ ಪ್ರತಿಭಟನಾ ಮೆರವಣಿಗೆ ಹಾಗೂ ಸಭೆಯಲ್ಲಿ ಮಾತನಾಡಿದ ವೀಣಾ ಶೆಟ್ಟಿ, ಮುಸ್ಲಿಂ ಹುಡುಗಿಯರನ್ನು ಶಾಲಾ ಕಾಲೇಜಿಗೆ ಸೇರಿಸಬೇಡಿ, ಮದರಸಗಳಿಗೆ ಸೇರಿಸಿ ಎಂದು ಹೇಳಿದ್ದರು. ವೀಣಾ ಶೆಟ್ಟಿ ಅವರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಸುಮೋಟೋ ಕೇಸ್ ಕೂಡ ಹಾಕಲಾಗಿದೆ. ಅಧಿಕಾರಿಯೊಬ್ಬರು ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Previous articleಕರ್ನಾಟಕ ವಿಶ್ವವಿದ್ಯಾಲಯಕ್ಕೆ ಅನುದಾನ ಆಗ್ರಹಿಸಿ ರಸ್ತೆ ತಡೆ
Next articleಹೊಸ ಪಡಿತರ ಕಾರ್ಡ್​ ವಿತರಣೆಗೆ ಸೂಚನೆ